Select Your Language

Notifications

webdunia
webdunia
webdunia
webdunia

ಪ್ರಮಾಣ ವಚನಕ್ಕೆ ಕೆಲವೇ ಕ್ಷಣಗಳ ಮೊದಲು ಯಡಿಯೂರಪ್ಪ ನಿವಾಸಕ್ಕೆ ಡಿಕೆ ಶಿವಕುಮಾರ್: ಅಚ್ಚರಿಯ ಬೆಳವಣಿಗೆ

Yediyurappa-DK Shivakumar
Photo Credit: X
ಬೆಂಗಳೂರು: ರಾಜ್ಯದ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುವ ಕೆಲವೇ ಕ್ಷಣಗಳ ಮೊದಲು ಡಿಕೆ ಶಿವಕುಮಾರ್ ಬಿಜೆಪಿ ನಾಯಕ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ನಿವಾಸಕ್ಕೆ ಬಂದು ಅಚ್ಚರಿ ಮೂಡಿಸಿದ್ದಾರೆ.

ಇಂದು ಸಂಜೆ 4.05 ಕ್ಕೆ ಡಿಕೆ ಶಿವಕುಮಾರ್ ರಾಜ್ಯದ 25 ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಪ್ರಮಾಣ ವಚನ ಸ್ವೀಕಾರಕ್ಕೆ ಕೆಲವೇ ಕ್ಷಣಗಳ ಮುನ್ನ ಡಿಕೆ ಶಿವಕುಮಾರ್ ಚುರುಕಾಗಿ ಓಡಾಡುತ್ತಿದ್ದಾರೆ.

ಇಂದು ಅಚ್ಚರಿಯ ಬೆಳವಣಿಗೆ ಎಂದರೆ ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಯಡಿಯೂರಪ್ಪ ನಿವಾಸಕ್ಕೆ ಬಂದು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಬರುವಂತೆ ಖುದ್ದಾಗಿ ಆಹ್ವಾನ ನೀಡಿದ್ದಾರೆ. ಇದಕ್ಕೆ ತಮಿಳುನಾಡು ಸಿಎಂ ವಿಜಯ್, ಕೇರಳಂ ಸಿಎಂ ವಿಡಿ ಸತೀಶನ್ ಕೂಡಾ ಪ್ರಮಾಣ ವಚನಕ್ಕೆ ಮುನ್ನ ವಿರೋಧ ಪಕ್ಷದ ನಾಯಕರ ಮನೆಗೆ ಭೇಟಿ ನೀಡಿ ಆಹ್ವಾನಿಸಿದ್ದರು. ಇದೀಗ ಡಿಕೆಶಿ ಕೂಡಾ ಇದೇ ಹಾದಿ ಹಿಡಿದಿದ್ದಾರೆ.

ಸಿದ್ದರಾಮಯ್ಯನವರ ನಿವಾಸಕ್ಕೆ ಭೇಟಿ ನೀಡಿದ ಬಳಿಕ ಯಡಿಯೂರಪ್ಪನವರ ಡಾಲರ್ಸ್ ಕಾಲೊನಿಯಲ್ಲಿರುವ ನಿವಾಸಕ್ಕೆ ಬಂದಿದ್ದಾರೆ. ಈ ವೇಳೆ ಯಡಿಯೂರಪ್ಪನವರು ಖುದ್ದಾಗಿ ಶಾಲು ಹೊದೆಸಿ ಸನ್ಮಾನಿಸಿ ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ. ಬಳಿಕ ಮಾತನಾಡಿರುವ ಡಿಕೆ ಇವರೆಲ್ಲರೂ ರಾಜ್ಯದ ಬೆಳವಣಿಗೆಗೆ ಕೊಡುಗೆ ನೀಡಿದ್ದಾರೆ. ಹೀಗಾಗಿ ಎಲ್ಲರನ್ನೂ ಆಹ್ವಾನಿಸುತ್ತಿರುವುದಾಗಿ ಹೇಳಿದ್ದಾರೆ. ಯಡಿಯೂರಪ್ಪ ಬಳಿಕ ದೇವೇಗೌಡರ ನಿವಾಸಕ್ಕೂ ಭೇಟಿ ನೀಡುವುದಾಗಿ ಹೇಳಿದರು.


pic.twitter.com/BjtbKD0yFD

 

— Anand Singh (@Anand_Journ) June 3, 2026

Share this Story:

Follow Webdunia kannada

ಮುಂದಿನ ಸುದ್ದಿ

ಡಿಕೆ ಶಿವಕುಮಾರ್ ಜೀವನದ ಪವರ್ ಫುಲ್ ಮಹಿಳೆ ಯಾರು ಗೊತ್ತಾ