Select Your Language

Notifications

webdunia
webdunia
webdunia
webdunia

ನನ್ನ ಜೊತೆ ತಗ್ಗಿ ಬಗ್ಗಿ ನಡೆಯಬೇಕು: ಅನುದಾನ ಕೇಳಿದ ತೇಜಸ್ವಿ ಸೂರ್ಯಗೆ ಡಿಕೆ ಶಿವಕುಮಾರ್ ವಾರ್ನ್

DK Shivakumar-Tejasvi Surya
ಬೆಂಗಳೂರು: ನಮ್ಮ ಮೆಟ್ರೋ ನಾಗಸಂದ್ರ ಮಾದಾವರ ವಿಸ್ತರಿತ ಮಾರ್ಗಕ್ಕೆ ಚಾಲನೆ ನೀಡುವ ಸಂದರ್ಭದಲ್ಲಿ ತಮ್ಮ ಜೊತೆಗಿದ್ದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅನುದಾನದ ಬಗ್ಗೆ ಪ್ರಶ್ನಿಸಿದ್ದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ನನ್ನ ಬಳಿ ತಗ್ಗಿ ಬಗ್ಗಿ ನಡೆಯಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.

ಕಾರ್ಯಕ್ರಮದಲ್ಲಿ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅಕ್ಕಪಕ್ಕದಲ್ಲಿಯೇ ಕೂತು ಸಾಕಷ್ಟು ಚರ್ಚೆ ನಡೆಸಿದ್ದಾರೆ. ಈ ವೇಳೆ ಇತ್ತೀಚೆಗೆ ಬೆಂಗಳೂರು ಜಯನಗರ ಕ್ಷೇತ್ರಕ್ಕೆ ಮಾತ್ರ ಅನುದಾನ ಬಿಡುಗಡೆ ಮಾಡದೇ ಇರುವ ಕುರಿತು ತೇಜಸ್ವಿ ಸೂರ್ಯ ಪ್ರಶ್ನೆ ಮಾಡಿದ್ದಾರೆ.

ಬೆಂಗಳೂರಿನ ಎಲ್ಲಾ ಕ್ಷೇತ್ರಗಳಿಗೂ ಅನುದಾನ ನೀಡಿದ್ದೀರಿ. ಆದರೆ ಜಯನಗರ ಕ್ಷೇತ್ರಕ್ಕೆ ಮಾತ್ರ ಕೊಟ್ಟಿಲ್ಲ ಎಂದು ತೇಜಸ್ವಿ ಸೂರ್ಯ ಡಿಸಿಎಂ ಡಿಕೆ ಶಿವಕುಮಾರ್ ಬಳಿ ವಿಷಯ ಪ್ರಸ್ತಾಪಿಸಿದರು. ಇದಕ್ಕೆ ಡಿಕೆಶಿ, ಜಯನಗರ ಶಾಸಕ ಸಿಕೆ ರಾಮಮೂರ್ತಿ ವಿರುದ್ಧ ತೇಜಸ್ವಿ ಸೂರ್ಯ ಮುಂದೆ ಕೆಂಡ ಕಾರಿದ್ದಾರೆ.

ನಾವು ಅಧಿಕಾರಕ್ಕೆ ಬಂದ ಮೇಲೆ ಬೆಂಗಳೂರು ದಕ್ಷಿಣ ಅಧೋಗತಿಗೆ ತಲುಪಿದೆ ಎಂದು ಹೇಳುತ್ತಾರೆ ಎಂದು ಬೇಸರ ವ್ಯಕ್ತಪಡಿಸಿದ ಡಿಕೆ ಶಿವಕುಮಾರ್, ನನ್ನ ಬಳಿ ತಗ್ಗಿ ಬಗ್ಗಿ ನಡೆಯಬೇಕು, ಎಲ್ಲರ ಜೊತೆ ಇದ್ದ ಹಾಗೆ ನನ್ನ ಜೊತೆ ಇದ್ದರೆ ನಡೆಯಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಅಷ್ಟೇ ಅವರು ಹೇಳಿದ ಮಾತನ್ನು ಪ್ರೂವ್ ಮಾಡಲಿ ಆಮೇಲೆ ಅನುದಾನ ಬಿಡುಗಡೆ ಮಾಡ್ತೀನಿ ಎಂದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಎರಡನೇ ಬಾರಿ ಅಧ್ಯಕ್ಷರಾದ ಬಳಿಕ ಅಮೆರಿಕನ್ನರಿಗೆ ಈ ಪ್ರಾಮಿಸ್ ಮಾಡಿದ ಡೊನಾಲ್ಡ್ ಟ್ರಂಪ್