ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೊರೊನಾ ಮುಕ್ತರಾಗಿದ್ದಾರೆ. ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದ್ದರಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಡಿ.ಕೆ.ಶಿವಕುಮಾರ್, ಚಿಕಿತ್ಸೆ ಪಡೆದುಕೊಂಡು ಗುಣಮುಖರಾಗಿದ್ದಾರೆ. ಆಸ್ಪತ್ರೆಯಿಂದ ಬಿಡುಗಡೆಗೊಂಡಿರುವ ಡಿಕೆಶಿ, ಹೋಂ ಕ್ವಾರಂಟೈನ್ ಗೆ ಒಳಗಾಗಲಿದ್ದಾರೆ.