Webdunia - Bharat's app for daily news and videos

Install App

ಅರ್ಜುನ್ ಜನ್ಯಾ, ಹಂಸಲೇಖ ಸೇರಿದಂತೆ ಸಂಗೀತ ನಿರ್ದೇಶಕರಿಗೆ ಪತ್ರ ಬರೆದ ಡಿಕೆ ಶಿವಕುಮಾರ್

Krishnaveni K
ಶುಕ್ರವಾರ, 23 ಮೇ 2025 (17:19 IST)
ಬೆಂಗಳೂರು: ಕರ್ನಾಟಕದ ಹೆಮ್ಮೆಯ ಜೀವನದಿ ಕಾವೇರಿಗೆ ಗಂಗಾರತಿ ಮಾದರಿಯಲ್ಲಿ 'ಕಾವೇರಿ ಆರತಿ' ನಡೆಸುವ ರಾಜ್ಯ ಸರ್ಕಾರದ ಮಹತ್ವದ ನಿರ್ಧಾರಕ್ಕೆ ಪೂರಕವಾಗಿ, ವಿಶೇಷ ಗೀತೆಯೊಂದನ್ನು ರಚಿಸಲು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ಜಲಮಂಡಳಿ ಮತ್ತು ಕಾವೇರಿ ಆರತಿ ಸಮಿತಿಯ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರು ಖ್ಯಾತ ಸಂಗೀತ ನಿರ್ದೇಶಕರಾದ ಶ್ರೀ ಹಂಸಲೇಖ, ಶ್ರೀ ಸಾಧು ಕೋಕಿಲ ಹಾಗೂ ಶ್ರೀ ಅರ್ಜುನ್ ಜನ್ಯ ಅವರಿಗೆ ಪತ್ರ ಬರೆದಿದ್ದಾರೆ.
 
ರಾಜ್ಯ ಸರ್ಕಾರವು  ಕಾವೇರಿ   ಆರತಿಯನ್ನು ಸಾಂಸ್ಕೃತಿಕವಾಗಿ ಮತ್ತು ಸಾಹಿತ್ಯಾತ್ಮಕವಾಗಿ ಶ್ರೀಮಂತಗೊಳಿಸುವ ಉದ್ದೇಶವನ್ನು ಹೊಂದಿದೆ. ಈ ಹಿನ್ನೆಲೆಯಲ್ಲಿ ಜಾನಪದ ಸೊಬಗು, ಧಾರ್ಮಿಕತೆಯ ಮೆರಗು ಹಾಗೂ ಭಕ್ತಿ ಭಾವದಿಂದ ಕೂಡಿರುವ ಗೀತೆಯನ್ನು ರಚಿಸುವ ಅಗತ್ಯವಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.
 
ಬದಲಾದ ಕಾಲಘಟ್ಟಕ್ಕೆ ಹೊಂದಿಕೊಳ್ಳುವಂತೆ, ವರ್ಣರಂಜಿತವಾಗಿ ಮೂಡಿಬರಲಿರುವ ಈ ಗೀತೆಯು ಕಾವೇರಿ ಮಾತೆಯ ಸಂಪೂರ್ಣ ಚಿತ್ರಣವನ್ನು ಕಣ್ಣಿಗೆ ಕಟ್ಟುವಂತಿರಬೇಕು. ಕಾವೇರಿ ಮಾತೆಯ ಪರಂಪರೆಯನ್ನು ಉಳಿಸುವುದರ ಜೊತೆಗೆ, ಜಲ ಶ್ರೀಮಂತಿಕೆ ಸಹಿತ ಕಾವೇರಿ ವೈಭವವನ್ನು ದೇಶ ವಿದೇಶಗಳಿಗೆ ಹಾಡು ಮತ್ತು ಸಂಗೀತದ ಮೂಲಕ ಸಾರುವ ಹಾಗೂ ಆರತಿಯ ಮಹಿಮೆಯನ್ನು ಮೇಳೈಸುವ ಅದ್ಭುತವಾದ ಸಾಹಿತ್ಯ ಮತ್ತು ಗೀತ ಸಂಯೋಜನೆ ಆಗಬೇಕಿದೆ ಎಂದು ಡಿಸಿಎಂ ಶಿವಕುಮಾರ್  ಹೇಳಿದ್ದಾರೆ.
 
ರಚನೆಯಾದ ಈ ಗೀತೆಯನ್ನು ಧ್ವನಿ ಸುರಳಿ ರೂಪದಲ್ಲಿ ತಂದು, ಕಾವೇರಿ ಆರತಿ ಸಂದರ್ಭದಲ್ಲಿ ಬರುವ ಭಕ್ತಾದಿಗಳಿಗೆ ಕಣ್ಣು ತುಂಬಿಕೊಳ್ಳುವಂತೆ ಮಾಡುವುದು ಇದರ ಪ್ರಮುಖ ಉದ್ದೇಶವಾಗಿದೆ. ಈ ಹಿನ್ನೆಲೆಯಲ್ಲಿ, ಕಾವೇರಿಯ ಮೆರುಗನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕಾವೇರಿ ಮಾತೆ ಹಾಗೂ ಕಾವೇರಿ ಆರತಿಗೆ ಸಂಬಂಧಿಸಿದಂತೆ ಗೀತ ರಚನೆ ಮಾಡುವಂತೆಯೂ, ಆಯ್ಕೆಯಾದ ಗೀತೆಯನ್ನು ಕಾವೇರಿ ಆರತಿ ಸಂದರ್ಭದಲ್ಲಿ ಪ್ರಸಾರ ಮಾಡಲಾಗುವುದು ಎಂದು ಡಿ.ಕೆ. ಶಿವಕುಮಾರ್ ಅವರು ಪತ್ರದಲ್ಲಿ ತಿಳಿಸಿದ್ದಾರೆ.
 
ಈ ಮೂಲಕ ಕಾವೇರಿ ನದಿಯ ಮಹತ್ವವನ್ನು ಸಾಂಸ್ಕೃತಿಕವಾಗಿ ಎತ್ತಿ ಹಿಡಿಯುವ ಮತ್ತು ಭಕ್ತಾದಿಗಳಲ್ಲಿ ಭಕ್ತಿ ಭಾವವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ ಎಂದು ಡಿ.ಕೆ. ಶಿವಕುಮಾರ್  ಹೇಳಿದ್ದಾರೆ
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಅಧಿಕಾರ ಸರ್ಕಾರಕ್ಕಿದೆ: ಸಿದ್ದರಾಮಯ್ಯ

ಅರ್ಜುನ್ ಜನ್ಯಾ, ಹಂಸಲೇಖ ಸೇರಿದಂತೆ ಸಂಗೀತ ನಿರ್ದೇಶಕರಿಗೆ ಪತ್ರ ಬರೆದ ಡಿಕೆ ಶಿವಕುಮಾರ್

121 ಬಾಂಗ್ಲಾದೇಶಿ ಪ್ರಜೆಗಳ ಬಂಧನ, ಮುಂದುವರೆದ ವಿಚಾರಣೆ

ಮದುವೆ ಮಂಟಪದಲ್ಲಿ ಈ ರೀತಿ ಮಾಡಿದ್ರೆ ಗಂಡುಮಕ್ಕಳು ಯಾವಾ ಧೈರ್ಯದಲ್ಲಿ ಮದುವೆ ಆಗೋದು ಹೇಳಿ

DK Shivakumar: ನ್ಯಾಷನಲ್ ಹೆರಾಲ್ಡ್ ಕೇಸ್ ನಲ್ಲಿ ಡಿಕೆ ಶಿವಕುಮಾರ್: 25 ಲಕ್ಷ ಕೊಟ್ಟಿದ್ದೆ ತಪ್ಪೇನು ಎಂದ ಡಿಸಿಎಂ

ಮುಂದಿನ ಸುದ್ದಿ
Show comments