Select Your Language

Notifications

webdunia
webdunia
webdunia
webdunia

ಡಿಕೆಶಿ, ಸಿ.ಪಿ.ಯೋಗೇಶ್ವರ್ ಮಧ್ಯೆ ಬಿರುಕು ಸಾಧ್ಯತೆ?

ಡಿಕೆಶಿ, ಸಿ.ಪಿ.ಯೋಗೇಶ್ವರ್ ಮಧ್ಯೆ ಬಿರುಕು ಸಾಧ್ಯತೆ?
ರಾಮನಗರ , ಭಾನುವಾರ, 4 ಜೂನ್ 2017 (18:39 IST)
ರಾಮನಗರದ ಚನ್ನಪಟ್ಟಣ ಶಾಸಕ ಸಿ.ಪಿ.ಯೋಗೇಶ್ವರ್ ಸಹೋದರ ಸಿ.ಪಿ.ರಾಜೇಶ್‌ ಜಿಪಂ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಫರ್ಮಾನ್ ಹೊರಡಿಸಿರುವುದರಿಂದ ಇಬ್ಬರ ಮಧ್ಯೆ ಬಿರುಕು ಉಂಟಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ. 
 
ನಾಳೆ ಸಂಜೆಯೊಳಗೆ ಸಿ.ಪಿ.ರಾಜೇಶ್ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಸಚಿವ ಡಿ.ಕೆ.ಶಿವಕುಮಾರ್ ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ. 
 
ಜಿಲ್ಲೆಯ ನಾಲ್ಕು ತಾಲೂಕುಗಳಿಗೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸ್ಥಾನ ದೊರೆಯಬೇಕು ಎನ್ನುವ ನಿಟ್ಟಿನಲ್ಲಿ ರಾಜೇಶ್ ಅವರಿಗೆ ರಾಜೀನಾಮೆ ನೀಡುವಂತೆ ಹೇಳಿದ್ದಾಗಿ ಸಚಿವರು ತಿಳಿಸಿದ್ದಾರೆ.
 
ಡಿ.ಕೆ.ಶಿವಕುಮಾರ್ ಹೇಳಿಕೆ ಬಗ್ಗೆ ನನಗೆ ತಿಳಿದಿಲ್ಲ. ಸಹೋದರ ಸಿ.ಪಿ.ಯೋಗೇಶ್ವರ್ ಅವರೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳುವುದಾಗಿ ಸಿ.ಪಿ.ರಾಜೇಶ್ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಪಂಜಾಬ್‌ನಲ್ಲಿ ಮೂವರು ಉಗ್ರಗಾಮಿಗಳ ಬಂಧನ