Publish Date: Thu, 15 May 2025 (19:12 IST)
Updated Date: Thu, 15 May 2025 (19:20 IST)
ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಅವರು ಇಂದು 62ನೇ ಹುಟ್ಟು ಹಬ್ಬವನ್ನು ವಿಶೇಷವಾಗಿ ಆಚರಿಸಿಕೊಂಡಿದ್ದಾರೆ.
ದೇಶಕ್ಕಾಗಿ ಯೋಧರು ಪ್ರಾಣವನ್ನು ಪಣಕ್ಕಿಟ್ಟು ಹೋರಾಡುವ ಸಂದರ್ಭದಲ್ಲಿ ನಾನು ಈ ಬಾರಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ. ಯಾರೂ ಮನೆ ಹತ್ರ ಆಗಲಿ, ಕಚೇರಿ ಬಳಿ ಬರಬೇಡಿ. ಬರ್ತಡೇ ದಿನ ನಾನು ಮನೆಯಲ್ಲಿ ಇರುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಅಭಿಮಾನಿಗಳ ಬಳಿ ಕೇಳಿಕೊಂಡಿದ್ದರು.
ಇದೀಗ ಬರ್ತಡೇ ದಿನವನ್ನು ವಿಶೇಷವಾಗಿ ಫ್ಯಾಮಿಲಿ ಜತೆ ಕಳೆದಿದ್ದಾರೆ. ಈ ಸಂಬಂಧ ವಿಡಿಯೋವನ್ನು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದಾರೆ.
ಈ ವರ್ಷದ ಹುಟ್ಟುಹಬ್ಬವನ್ನು ವಿಶೇಷವಾಗಿ ಕಬಿನಿಯಲ್ಲಿ ಕಾಲ ಕಳೆಯುವ ಮೂಲಕ ಆಚರಿಸಿದೆ. ಪ್ರಕೃತಿಯೊಂದಿಗೆ ಒಂದಾದ ಭಾವ, ಕಬಿನಿಯ ಸೌಂದರ್ಯ, ವನ್ಯಸಂಪತ್ತನ್ನು ಕಣ್ತುಂಬಿಕೊಂಡು, ಪ್ರಶಾಂತವಾದ ಜಗತ್ತಿಗೆ ಕಾಲಿಟ್ಟ ಅನುಭವವಾಯಿತು.