Select Your Language

Notifications

webdunia
webdunia
webdunia
webdunia

DK Shivkumar: ಈ ಬಾರಿ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿಲ್ಲ, ಡಿಸಿಎಂ ಡಿಕೆ ಶಿವಕುಮಾರ್‌ ಕೊಟ್ಟ ಸ್ಟ್ರಾಂಗ್ ಕಾರಣ ಹೀಗಿದೆ

ಡಿಸಿಎಂ ಡಿಕೆ ಶಿವಕುಮಾರ್

Sampriya

ಬೆಂಗಳೂರು , ಬುಧವಾರ, 14 ಮೇ 2025 (12:20 IST)
Photo Credit X
ಬೆಂಗಳೂರು: ಇದೇ 15ರಂದು ಡಿಸಿಎಂ ಡಿಕೆ ಶಿವಕುಮಾರ್‌ ಅವರು 62ನೇ ಹುಟ್ಟುಹಬ್ಬದ ಸಂಭ್ರದಲಿದ್ದಾರೆ.  ಆದರೆ ಈ ಬಾರಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ ಎಂದು ಡಿಸಿಎಂ ಶಿವಕುಮಾರ್ ಹೇಳಿದ್ದಾರೆ.

ಭಯೋತ್ಪಾದನೆ ವಿರುದ್ಧ ನಮ್ಮ ಯೋಧರು ಪ್ರಾಣ ಪಣಕ್ಕಿಟ್ಟು ಹೋರಾಡುತ್ತಿರುವ ಸಂದರ್ಭವಿದು. ಹೀಗಾಗಿ ಮೇ 15ರಂದು ಯಾರೂ ನನ್ನ ಜನ್ಮದಿನವನ್ನು ಆಚರಣೆ ಮಾಡುವುದು ಬೇಡ ಎಂದು ವಿನಂತಿ ಮಾಡುತ್ತೇನೆ. ನಿಮ್ಮ ಆಶೀರ್ವಾದ ಸದಾ ಹೀಗೆ ಇರಲಿ, ಅದುವೇ ನನಗೆ ಶ್ರೀರಕ್ಷೆ ಎಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಾಕಿ ಬರೆದುಕೊಂಡಿದ್ದಾರೆ.

ಪ್ರೀತಿಯ ಸ್ನೇಹಿತರು, ಹಿತೈಷಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರೇ,  ಭಯೋತ್ಪಾದನೆ ವಿರುದ್ಧ ನಮ್ಮ ದೇಶದ ಯೋಧರು ಪ್ರಾಣ ಪಣಕ್ಕಿಟ್ಟು ಹೋರಾಡುತ್ತಿರುವ ಸಂದರ್ಭವಿದು. ಹೀಗಾಗಿ ಮೇ 15ರಂದು ಯಾರೂ ನನ್ನ ಜನ್ಮದಿನ ಆಚರಣೆ ಮಾಡುವುದು ಬೇಡ ಎಂದು ವಿನಂತಿ ಮಾಡುತ್ತಿದ್ದೇನೆ.

ನಾನು ಮೇ 15ರಂದು ಬೆಂಗಳೂರಿನಲ್ಲಿ ಯ ಇರುವುದಿಲ್ಲ. ಹೀಗಾಗಿ ನನ್ನನ್ನು ಭೇಟಿ ಮಾಡಲು ಯಾರೂ ನನ್ನ ನಿವಾಸಕ್ಕಾಗಲಿ, ಕಚೇರಿಗಾಗಲಿ ಬರಬೇಡಿ. ಯಾರು ಅನ್ಯತಾ ಭಾವಿಸಬಾರದು. ಜನ್ಮದಿನದ ಪ್ರಯುಕ್ತ ಯಾವುದೇ ಫ್ಲೆಕ್ಸ್‌, ಬ್ಯಾನರ್‌ ಹಾಕಬೇಡಿ. ಜಾಹೀರಾತು ನಿಡಬೇಡಿ. ನಿಮ್ಮ ಆಶೀರ್ವಾದವೇ ನನಗೆ ಶ್ರೀರಕ್ಷೆ. ನ ಈವು ಇರುವ ಜಾಗದಿಂದಲೇ ನನಗೆ ಶುಭ ಹಾರೈಸಿ, ಆಶೀರ್ವದಿಸಿ ಎಂದು ಬರೆದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಅನುಮಾನಸ್ಪದವಾಗಿ ಬಿಜೆಪಿ ನಾಯಕ ದಿಲೀಪ್‌ ಘೋಷ್‌ ಮಲಮಗ ಪ್ರೀತಮ್ ಶವವಾಗಿ ಪತ್ತೆ