ಸ್ವಾಮೀಜಿಗಳು ಇಲ್ಲದಿದ್ದರೆ ದೇವೇಗೌಡರು ಸಿಎಂ ಆಗ್ತೀದ್ರಾ: ಕುಮಾರಸ್ವಾಮಿಗೆ ಶಿವಕುಮಾರ್ ಪ್ರಶ್ನೆ

Sampriya
ಭಾನುವಾರ, 30 ನವೆಂಬರ್ 2025 (16:50 IST)
ಬೆಂಗಳೂರು: ಬಹಳ ದೊಡ್ಡವರಾಗಿರುವ ಎಚ್ ಡಿ ಕುಮಾರಸ್ವಾಮಿ ಅವರು ಯಾರಾ ಬೆಂಬಲವನ್ನು ಪಡೆಯುವುದಿಲ್ಲ. ಅವರು  ಒಕ್ಕಲಿಗರ ಮಠ, ಒಕ್ಕಲಿಗರ ಸಂಘ, ಒಕ್ಕಲಿಗ ಜಾತಿಯನ್ನು ಎಂದೂ ಉಪಯೋಗಿಸಿಕೊಂಡಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಮಾಡಿದ್ದಾರೆ. 

ಮಾಧ್ಯಮಗಳು ನಿಮ್ಮ ಪರವಾಗಿ ಸ್ವಾಮೀಜಿಗಳು ಧ್ವನಿ ಎತ್ತಿರುವುದಕ್ಕೆ ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದಾರಲ್ಲ ಎಂಬ  ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ಒಕ್ಕಲಿಗ ಮಠದ ಹಿರಿಯ ಸ್ವಾಮೀಜಿಗಳು ಇಲ್ಲದಿದ್ದರೆ ದೇವೇಗೌಡರು ಸಿಎಂ ಆಗುತ್ತಿದ್ದರೆ ಎಂದು ಪ್ರಶ್ನೆ ಹಾಕಿದ್ದಾರೆ. 

ಪಾಪ, ಕುಮಾರಣ್ಣನಿಗೆ ಒಕ್ಕಲಿಗರ ಎರಡನೇ ಮಠ ಹೇಗಾಯಿತು ಎಂಬುದು ಗೊತ್ತಿಲ್ಲವೇ? ಅದನ್ನು ಕಟ್ಟಿದವರು ಯಾರು?ದೇವೇಗೌಡರ ಪರ ಸ್ವಾಮೀಜಿಗಳು ರಸ್ತೆಗೆ ಇಳಿಯಲಿಲ್ಲವೇ? ಸದಾನಂದ ಗೌಡರಿಗೆ ತೊಂದರೆ ಆದಾಗ ಸ್ವಾಮೀಜಿಗಳು ಸುಮ್ಮನೆ ಕೂತಿದ್ದರಾ? ಕೆಲವು ಸಂದರ್ಭದಲ್ಲಿ ಸ್ವಾಮೀಜಿಗಳು ಮಾತನಾಡುತ್ತಾರೆ. ಅದರಲ್ಲಿ ತಪ್ಪೇನಿದೆ? ಬೇರೆ ಸಂದರ್ಭದಲ್ಲಿ ಸ್ವಾಮೀಜಿಗಳು ಮಾತನಾಡಿದಾಗ ನಾನು ಬೇಸರ ಮಾಡಿಕೊಂಡಿದ್ದೇನಾ ಎಂದು ಮರು ಪ್ರಶ್ನೆ ಮಾಡಿದರು. 

ಈ ಸಂದರ್ಭದಲ್ಲಿ ನಾನು ಸ್ವಾಮೀಜಿಗಳ ಬೆಂಬಲವನ್ನು ಕೋರಲಿಲ್ಲ. ಅವರೇ ನನ್ನ ಮೇಲಿನ ಪ್ರೀತಿತಿಂದ ಮಾತನಾಡಿದ್ದಾರೆ ಎಂದರು. 

ಒಂದು ಸಮುದಾಯದಲ್ಲಿ ಹುಟ್ಟಿರುವ ನಾನು ಎಲ್ಲ ಸಮುದಾಯಗಳನ್ನು ಪ್ರೀತಿ, ಗೌರವದಿಂದ ಕಾಣುತ್ತೇನೆ. ಬಾಳೆಹೊನ್ನೂರು ಸ್ವಾಮಿಜಿ, ಶ್ರೀಶೈಲ ಸ್ವಾಮೀಜಿ ಸೇರಿದಂತೆ ಸಾಕಷ್ಟು ಸ್ವಾಮೀಜಿಗಳು ನನ್ನ ಪರ ಮಾತನಾಡಿದ್ದಾರೆ. ನನ್ನ ಮೇಲೆ ಅವರಿಗೆ ಪ್ರೀತಿ, ವಿಶ್ವಾಸ ಇದೆ. ಹೀಗಾಗಿ ಮಾತನಾಡಿದ್ದಾರೆ. ಇನ್ನೂ ಜೈನ ಸ್ವಾಮೀಜಿಗಳು ಕೂಡ ದೊಡ್ಡ ಸಮಾವೇಶದಲ್ಲಿ ಬಹಿರಂಗವಾಗಿ ಆಶೀರ್ವಾದ ಮಾಡಿದರು ಎಂದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಮುಂದಿನ ಐದು ದಿನ ಹೇಗಿರಲಿದೆ ಗೊತ್ತಾ ಹವಾಮಾನ

ಸಾಹಿತ್ಯ, ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿದ್ದ ಕನಕಗುರು ಪೀಠದ ಸಿದ್ದರಾಮನಂದ ಸ್ವಾಮೀಜಿ ಇನ್ನಿಲ್ಲ

ಡಿಕೆ ಶಿವಕುಮಾರ್ ಶಿಕಾರಿಪುರದಲ್ಲಿ ಸ್ಪರ್ಧಿಸಲಿ: ವಿಜಯೇಂದ್ರ ಸವಾಲು

ಕಮಿಷನರ್ ಗೆ ಜೀವಬೆದರಿಕೆ ಹಾಕಿದ ಕೈ ನಾಯಕ ರಾಜೀವ್ ಗೌಡ ಬಂಧನವಾಗಬೇಕು: ಛಲವಾದಿ ನಾರಾಯಣಸ್ವಾಮಿ

ರಾಹುಲ್ ಗಾಂಧಿ ಜೊತೆ ಏನು ಚರ್ಚೆ ಮಾಡಿದ್ರಿ ಎಂದರೆ ಡಿಕೆ ಶಿವಕುಮಾರ್ ಹೇಳಿದ್ದೇನು

ಮುಂದಿನ ಸುದ್ದಿ
Show comments