Publish Date: Sun, 06 Apr 2025 (12:16 IST)
Updated Date: Sun, 06 Apr 2025 (12:19 IST)
ಮಂಗಳೂರು: ರಾಜಕೀಯದಲ್ಲಿ ಮತ್ತೇ ನಳಿನ್ ಕುಮಾರ್ ಕಟೀಲ್‌ಗೆ ಸ್ಥಾನಮಾನ ಸಿಗಲು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳುವ ಮೂಲಕ ಕುತೂಹಲ ಮೂಡಿಸಿದ್ದಾರೆ.
ಕೇರಳದ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವದ ಹಿನ್ನೆಲೆ ಡಿಕೆ ಶಿವಕುಮಾರ್ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ನಳಿನ್ ಕುಮಾರ್ ಕಟೀಲ್ ಹಾಗೂ ಡಿಕೆ ಶಿವಕುಮಾರ್ ಒಂದೇ ವೇದಿಕೆಯಲ್ಲಿ ಜೊತೆಯಾಗಿದ್ದರು. ಈ ಸಂದರ್ಭದಲ್ಲಿ ನಳಿನ್ ಕುಮಾರ್ ಕಟೀಲ್ ಪರ ಡಿಕೆಶಿ ಮಾತನಾಡಿರುವುದು ಭಾರೀ ಕುತೂಹಲ ಮೂಡಿಸಿದೆ.
ವೇದಿಕೆಯಲ್ಲಿ ನನ್ನ ಸ್ನೇಹಿತ, ಮಾಜಿ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಇದ್ದಾರೆ. ಅವರು ಮಾಜಿ ಅಂದು ಕೊಳ್ಳೋದು ಬೇಡ, ರಾಜಕಾರಣದಲ್ಲಿ ಯಾವುದೂ ಶಾಶ್ವತ ಅಲ್ಲ. ಹೀರೋ ಝೀರೋ ಆಗುತ್ತಾನೆ, ಝೀರೋ ಹೀರೋ ಆಗುತ್ತಾನೆ. ನಾನು ಮತ್ತು ನೀವು ಒಂದೇ ವೇದಿಕೆಯಲ್ಲಿ ದೇವರನ್ನ ಪ್ರಾರ್ಥನೆ ಮಾಡಿದ್ದೇವೆ. ಭಗವಂತ ನಿಮ್ಮ ಎಲ್ಲಾ ವಿಘ್ನ ನಿವಾರಣೆ ಮಾಡಿ ಮತ್ತೆ ಈ ರಾಜ್ಯದಲ್ಲಿ ಸೇವೆ ಮಾಡುವ ಅವಕಾಶ ಕೊಡಲಿ. ಮತ್ತೆ ನಿಮಗೆ ಅವಕಾಶ ಸಿಗಲಿ ಅಂತ ನಾನೂ ಕೂಡ ಪ್ರಾರ್ಥನೆ ಮಾಡುತ್ತೇನೆ ಎಂದರು.