ಮಡಿಕೇರಿ: ಕನ್ನಡ ನಾಡಿನ ಜೀವನದಿ ಕಾವೇರಿಯ ಪವಿತ್ರ ತೀರ್ಥೋದ್ಭವಕ್ಕೆ ಕ್ಷಣಗಣನೆ ಶುರುವಾಗಿದ್ದು, ನಾಳೆ ಮಧ್ಯಾಹ್ನ 1:44ಕ್ಕೆ ಸಲ್ಲುವ ಮಕರ ಲಗ್ನದಲ್ಲಿ ಕಾವೇರಿಯು ತೀರ್ಥರೂಪಿಣಿಯಾಗಿ ಭಕ್ತರಿಗೆ ಒಲಿಯಲಿದ್ದಾಳೆ.
ಇನ್ನೂ ಈ ಅದ್ಭುತ ಕ್ಷಣವನ್ನು ತುಂಬಿಕೊಳ್ಳಲು ಭಕ್ತರು ಕಾತುರದಿಂದ ಕಾಯುತ್ತಿದ್ದು, ಒಂದು ತಿಂಗಳ ಕಾಲ ನಡೆಯುವ ಕಾವೇರಿ ತುಲಾ ಸಂಕ್ರಮಣ ಜಾತ್ರೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.
ವರ್ಷಕ್ಕೊಮೆ ನಡೆಯುವ ಈ ಕ್ಷಣವನ್ನು ತುಂಬಿಕೊಳ್ಳಲು ಸಹಸ್ರಾರು ಭಕ್ತರ ದೇಶದ ಮೂಲೆ ಮೂಲೆಯಿಂದ ಬರುತ್ತಾರೆ. ಇದಕ್ಕಾಗಿ ತಲಕಾವೇರಿ ಹಾಗೂ ತ್ರಿವೇಣಿ ಸಂಗಮ ಭಾಗಮಂಡಲ ಸಕಲ ರೀತಿಯಲ್ಲಿ ಸಿದ್ಧತೆ ನಡೆಯುತ್ತಿದೆ.
ಈ ಕ್ಷಣವನ್ನು ಕಣ್ತುಂಬಿಕೊಳ್ಳಲು ಡಿಸಿಎಂ ಡಿ.ಕೆ ಶಿವಕುಮಾರ್, ಮುಜರಾಯಿ ಇಲಾಖೆಯ ಸಚಿವ ರಾಮಲಿಂಗ ರೆಡ್ಡಿ, ವಿರಾಜಪೇಟೆ ಶಾಸಕ ಎ.ಎಸ್ ಪೊನ್ನಣ್ಣ, ಮಂಥರ್ ಗೌಡ ಸೇರಿದಂತೆ ಹಲವಾರು ಗಣ್ಯರು ಭಾಗಿಯಾಗಲ್ಲಿದ್ದಾರೆ.