Webdunia - Bharat's app for daily news and videos

Install App

ರಾಜ್ಯದಲ್ಲಿ ನಡೆಯುವ ಚುನಾವಣೆ ಎದುರಿಸಲು ಸಿದ್ದ- ಡಿಕೆ ಶಿವಕುಮಾರ್

Webdunia
ಮಂಗಳವಾರ, 29 ಮಾರ್ಚ್ 2022 (19:06 IST)
ರಾಜ್ಯದಲ್ಲಿ ಅವಧಿಗೆ ಮುನ್ನ ವಿಧಾನಸಭಾ ಚುನಾವಣೆ ನಡೆದರೆ ಮತದಾರರನ್ನು ಎದುರಿಸಲು ತಮ್ಮ ಪಕ್ಷ ಸಿದ್ಧವಿದೆ ಎಂದು ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಮಂಗಳವಾರ ಹೇಳಿದ್ದಾರೆ. ಅಲ್ಲದೆ ನವೆಂಬರ್ 27 ರಂದು ಚುನಾವಣೆ ಘೋಷಣೆ ಮಾಡಬಹುದು ಎಂದು ಸಂಭವನೀಯ ದಿನಾಂಕವನ್ನೂ ಉಲ್ಲೇಖಿಸಿದ್ದಾರೆ.
 ಏತನ್ಮಧ್ಯೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಈ ವಾರದ ಕೊನೆಯಲ್ಲಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ ಮತ್ತು ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಪಕ್ಷದ ತಯಾರಿ ಮತ್ತು ಪದಾಧಿಕಾರಿಗಳೊಂದಿಗೆ ಸರಣಿ ಸಭೆಗಳನ್ನು ನಡೆಸಲಿದ್ದಾರೆ.
 
ರಾಜ್ಯದಲ್ಲಿ ಅವಧಿಗೂ ಮುನ್ನ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆ ಕುರಿತ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ, ಅವರು(ಚುನಾವಣಾ ಆಯೋಗ) ಬಯಸಿದಾಗ ಅದನ್ನು(ಚುನಾವಣೆ ಘೋಷಿಸಲಿ) ಮಾಡಲಿ... ನಾಳೆಯೇ, ಈ ತಿಂಗಳು, ನವೆಂಬರ್ 27 ಅಥವಾ ಮುಂದಿನ ಮಾರ್ಚ್ ನಲ್ಲಿ ಚುನಾವಣೆ ಘೋಷಿಸಲಿ. ಕಾಂಗ್ರೆಸ್ ಚುನಾವಣೆ ಎದುರಿಸಲು ಸಿದ್ಧವಾಗಿದೆ ಎಂದಿದ್ದಾರೆ.
 
ನವೆಂಬರ್ 27 ಅನ್ನು ಚುನಾವಣೆ ಘೋಷಣೆಯ ದಿನಾಂಕ ಎಂದು ನಿರ್ದಿಷ್ಟವಾಗಿ ಉಲ್ಲೇಖಿಸಿರುವ ಬಗ್ಗೆ ಕೇಳಿದಾಗ, "ನೀವು(ವರದಿಗಾರರು) ಮಾಹಿತಿ ಪಡೆಯುವಂತೆಯೇ ನಮಗೂ ಕೆಲವು ಮಾಹಿತಿಗಳು ಸಿಗುತ್ತವೆ" ಎಂದು ಶಿವಕುಮಾರ್ ಹೇಳಿದರು.
 
ರಾಹುಲ್ ಗಾಂಧಿ ಅವರ ರಾಜ್ಯ ಪ್ರವಾಸದ ವಿವರಗಳನ್ನು ಹಂಚಿಕೊಂಡ ಶಿವಕುಮಾರ್ ಅವರು, ಮಾರ್ಚ್ 31 ರಂದು ಕರ್ನಾಟಕಕ್ಕೆ ಬರುತ್ತಿದ್ದು, ತುಮಕೂರು ಜಿಲ್ಲೆಯ ಪ್ರಮುಖ ಲಿಂಗಾಯತ ಮಠವಾದ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶಿವಕುಮಾರ ಸ್ವಾಮೀಜಿಗಳ 115ನೇ ಜನ್ಮ ವಾರ್ಷಿಕೋತ್ಸವದಂದು ಅವರ ಗದ್ದುಗೆಗೆ ನಮನ ಸಲ್ಲಿಸಲಿದ್ದಾರೆ ಎಂದರು.
 
ಅಂದು ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿಗೆ ಆಗಮಿಸುವ ರಾಹುಲ್ ಗಾಂಧಿ, ನೇರವಾಗಿ ಮಠಕ್ಕೆ ಭೇಟಿ ನೀಡಿ ನಗರಕ್ಕೆ ವಾಪಸಾಗಲಿದ್ದಾರೆ. ಬಳಿಕ ಏಪ್ರಿಲ್ 1 ರಂದು ಬೆಳಗ್ಗೆ 11 ಗಂಟೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ವ್ಯಾಪ್ತಿಯ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಮುಖಂಡರನ್ನು ಭೇಟಿ ಮಾಡಲಿದ್ದಾರೆ. ಅಲ್ಲದೆ ಶಾಸಕರು, ಪರಾಜಿತ ಅಭ್ಯರ್ಥಿಗಳು, ಮಾಜಿ ಸಂಸದರು ಮತ್ತು ಪದಾಧಿಕಾರಿಗಳನ್ನು ಒಳಗೊಂಡಂತೆ ರಾಜ್ಯ ಕಾಂಗ್ರೆಸ್‌ನ ವಿಸ್ತೃತ ಕಾರ್ಯಕಾರಿ ಸಮಿತಿಯನ್ನು ಭೇಟಿ ಮಾಡಲಿದ್ದಾರೆ ಎಂದು ಅವರು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments