Publish Date: Sat, 14 Feb 2026 (17:10 IST)
Updated Date: Sat, 14 Feb 2026 (17:13 IST)
ಸೂರಗೊಂಡನಕೊಪ್ಪ: ಇಲ್ಲಿನ ಭಾಯಾಗಡ್‌ದಲ್ಲಿ ನಡೆಯುತ್ತಿರುವ ಸಂತ ಸೇವಾಲಾಲ್ ಅವರ 287ನೇ ಜಯಂತಿಗೆ ಆಗಮಿಸಿದ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಕಪ್ಪು ಬಟ್ಟೆ ಪ್ರದರ್ಶಿಸಿದ ಘಟನೆ ನಡೆಯಿತು. ರಾಜ್ಯ ಸರ್ಕಾರ ಜಾರಿಗೆ ತಂದಿರುವ ಒಳಮೀಸಲಾತಿಯಿಂದ ಬಂಜಾರ ಸಮುದಾಯದ ಜನರು ಕಪ್ಪು ಬಟ್ಟೆ ಪ್ರದರ್ಶಿಸಿದರು.
ಡಿ.ಕೆ.ಶಿವಕುಮಾರ್ ಅವರು ವೇದಿಕೆಗೆ ಬರುತ್ತಿದ್ದಂತೆ ಸಭಾಂಗಣದಲ್ಲಿದ್ದ ಬಹುತೇಕ ಯುವಕರು ಎದ್ದು ನಿಂತು ಕಪ್ಪು ಬಟ್ಟೆ ಪ್ರದರ್ಶನ ಮಾಡಿದರು.
ಈ ಮೂಲಕ ರಾಜ್ಯ ಸರ್ಕಾರ ಅನುಷ್ಠಾನಕ್ಕೆ ತಂದಿರುವ ಒಳಮೀಸಲಾತಿ ನೀತಿಯಿಂದ ಸಮುದಾಯಕ್ಕೆ ದೊಡ್ಡ ಅನ್ಯಾಯ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದರಿಂದ ಉಪಮುಖ್ಯಮಂತ್ರಿ ಮುಜುಗರಕ್ಕೆ ಒಳಗಾದರು.
ಡಿ.ಕೆ.ಶಿವಕುಮಾರ್ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಒಳಮೀಸಲಾತಿ ವಿರೋಧಿಸುವ ಭಿತ್ತಿಚಿತ್ರಗಳನ್ನು ಪ್ರದರ್ಶಿಸಿದರು. ಇದರಿಂದ ಸಭಾಂಗಣದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಯಿತು. ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ನಿಯಂತ್ರಿಸಲು ಪ್ರಯತ್ನಿಸಿದರು.