ಯಾರು ಏನಾದ್ರೂ ಮಾಡ್ಕೊಳ್ಳಿ ಸಿದ್ದರಾಮಯ್ಯ ರಾಜೀನಾಮೆ ನೀಡಲ್ಲ ಎಂದ ಡಿಕೆ ಶಿವಕುಮಾರ್

Sampriya
ಮಂಗಳವಾರ, 24 ಸೆಪ್ಟಂಬರ್ 2024 (14:30 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯ  ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.

ಮುಡಾ ಹಗರಣ ಸಂಬಂಧ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಸಿದ್ದರಾಮಯ್ಯಗೆ ಎದುರಾಗಿರುವ ಸಂಕಷ್ಟದ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ  ಡಿಕೆ ಶಿವಕುಮಾರ್ ಅವರು, ಸಿದ್ದರಾಮಯ್ಯ ಅವರಿಗೆ ಸಂಪುಟ ಸಹೋದ್ಯೋಗಿಗಳಿಂದ ಸಂಪೂರ್ಣ ಬೆಂಬಲ ವ್ಯಕ್ತವಾಗುತ್ತಿದೆ. ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಅಗತ್ಯವೇ ಇಲ್ಲ ಎಂದು ಹೇಳಿದರು.

ನನ್ನನ್ನು ಹೇಗೆ ಪಿತೂರಿ ಮಾಡಿ ಜೈಲಿಗೆ ಕಳುಹಿಸಲಾಗಿತ್ತು. ಅದೇ ಷಡ್ಯಂತ್ರವನ್ನು ಬಿಜೆಪಿಯವರು ಸಿದ್ದರಾಮಯ್ಯ ವಿರುದ್ಧ ಮಾಡಿದ್ದಾರೆ. ತಪ್ಪು ಮಾಡದ ಸಿದ್ದರಾಮಯ್ಯ ಅವರು ಯಾವುದೇ ಹಗರಣದಲ್ಲಿ ಭಾಗಿಯಾಗಿಲ್ಲ ಎಂದು ಸಿಎಂ ಪರ ಬ್ಯಾಟಿಂಗ್ ಮಾಡಿದರು.

ಬಿಜೆಪಿಯ ರಾಜಕೀಯ ಪಿತೂರಿ ಇದಾಗಿದ್ದು, ನಾವೆಲ್ಲ ಸಿದ್ದರಾಮಯ್ಯ ಹಿಂದೆ ನಿಂತಿದ್ದೇವೆ ಎಂದು ಬೆಂಬಲ ಸೂಚಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಡಿಪಾರು ಆದೇಶದಲ್ಲಿ ಮಹೇಶ್‌ ಶೆಟ್ಟಿ ತಿಮರೋಡಿಗೆ ಬಿಗ್ ಶಾಕ್

ರಾಮಮಂದಿರ ದೇಣಿಗೆ ದುರುಪಯೋಗ: ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ

ಖಲಿಸ್ತಾನ್ ಗುಂಪಿನಿಂದ ಕೊಲೆ ಬೆದರಿಕೆ: ಭದ್ರತೆಯಲ್ಲಿ ಮಹತ್ವದ ಬದಲಾವಣೆ

ಮಕ್ಕಳಾಗಿಲ್ಲವೆಂದು ಸೊಸೆಯೊಬ್ಬಳನ್ನು ಈ ರೀತಿ ನಡೆಸಿಕೊಳ್ಳುವುದಾ, ಹೀನಾಯ ಘಟನೆ, Video

ಡಿಕೆ ಶಿವಕುಮಾರ್ ಇಡೀ ರಾಜ್ಯದ ಸಿಎಂ, ಅದು ಮರೆಯಬಾರದು: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments