ಬೆಂಗಳೂರು: ನವೆಂಬರ್ ಕ್ರಾಂತಿ ಹಿನ್ನೆಲೆ ರಾಜ್ಯ ರಾಜಕಾರಣದಲ್ಲಿ ಭಾರೀ ಬೆಳವಣಿಗೆ ನಡೆಯುತ್ತಿದೆ. ಡಿಕೆ ಶಿವಕುಮಾರ್ ಅವರು ಬಣದಿಂದ ಶಕ್ತಿಪ್ರದರ್ಶನಕ್ಕೆ ಕೆಲ ಶಾಸಕರು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.
ಈ ಬೆನ್ನಲ್ಲೇ ಡಿಕೆ ಶಿವಕುಮಾರ್ ಬೆಂಗಳೂರಿನ ಪರಪ್ಪನ ಅಗ್ರಹಾರದತ್ತ ಹೊರಟಿದ್ದಾರೆ.
ಜೈಲಿನಲ್ಲಿ ಧಾರವಾಡದ ಶಾಸಕ ವಿನಯ್ ಕುಲಕರ್ಣಿ ಮತ್ತು ಚಿತ್ರದುರ್ಗದ ಶಾಸಕ ವೀರೇಂದ್ರ ಪಪ್ಪಿ ಅವರನ್ನು ಭೇಟಿಯಾಗಲು ಡಿಕೆ ಶಿವಕುಮಾರ್ ಹೊರಟಿದ್ದಾರೆ.
ಈಗಾಗಲೇ ಡಿಕೆಶಿ ಬಣದ ಕೆಲ ಶಾಸಕರು ದೆಹಲಿಗೆ ತೆರಳಿದ್ದಾರೆ. ಇನ್ನೂ ಸಿಎಂ ಸಿದ್ದರಾಮಯ್ಯ ಬಣದ ಕೆಲ ಶಾಸಕರು ಬೆಂಗಳೂರಿನಲ್ಲಿ ಡಿನ್ನರ್ ಸಭೆ ನಡೆಸಿದ್ದಾರೆ.
ಕಳೆದ ಕೆಲ ತಿಂಗಳಿನಿಂದ ರಾಜ್ಯ ಸಿಎಂ ಬದಲಾವಣೆ ಚರ್ಚೆ ಭಾರೀ ಜೋರಾಗಿಯೇ ನಡೆಯುತ್ತಿದೆ. ಈ ಹಿಂದೆಯೇ ನವೆಂಬರ್ ಕ್ರಾಂತಿ ಆಗಲಿದೆ ಎಂಬ ಸುದ್ದಿ ಬಂದಿತ್ತು. ಆದರೆ ಈಗ ನವೆಂಬರ್ ಕ್ರಾಂತಿ ಆರಂಭವಾಗಿದ್ದು ನಂಬರ್ ಕ್ರಾಂತಿ ಆಗುತ್ತಾ ಎಂಬ ಪ್ರಶ್ನೆ ಎದ್ದಿದೆ.