Daily Horoscope
✕

ಅಣ್ಣನೂ ಸಿಎಂ ಆಗಬೇಕು ಎನ್ನೋದೇ ನನ್ನಾಸೆ: ಡಿಕೆ ಸುರೇಶ್

Krishnaveni K
ಗುರುವಾರ, 30 ಅಕ್ಟೋಬರ್ 2025 (09:52 IST)
ಬೆಂಗಳೂರು: ಅಣ್ಣ ಡಿಕೆ ಶಿವಕುಮಾರ್ ಕೂಡಾ ಸಿಎಂ ಆಗಬೇಕು ಎಂಬುದು ನನ್ನಾಸೆ. ಅದೃಷ್ಟ ಕೈ ಹಿಡಿದರೆ ಖಂಡಿತಾ ಸಿಎಂ ಆಗುತ್ತಾರೆ ಎಂದು ಮಾಜಿ ಸಂಸದ ಡಿಕೆ ಸುರೇಶ್ ಹೇಳಿದ್ದಾರೆ.

ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಡಿಕೆ ಸುರೇಶ್ ತಮ್ಮ ಅಣ್ಣ ಡಿಕೆ ಶಿವಕುಮಾರ್ ಸಿಎಂ ಆಗುವ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನವಂಬರ್ ಕ್ರಾಂತಿ ಬಗ್ಗೆ ಎಲ್ಲರೂ ಮಾತನಾಡುತ್ತಿದ್ದಾರೆ. ಆದರೆ ನನಗೆ ಇದರ ಬಗ್ಗೆ ಗೊತ್ತಿಲ್ಲ ಎಂದಿದ್ದಾರೆ.

‘ಅಧಿಕಾರ ಹಂಚಿಕೆ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ನೀವು ಈ ಬಗ್ಗೆ ಹೈಕಮಾಂಡ್ ನಾಯಕರು, ಪಕ್ಷದ ಅಧ್ಯಕ್ಷರು, ಮುಖ್ಯಮಂತ್ರಿಗಳನ್ನೇ ಕೇಳಬೇಕು. ನನ್ನ ಅಣ್ಣನ ಹಣೆಯಲ್ಲಿ ಸಿಎಂ ಆಗುವ ಯೋಗ ಬರೆದಿದ್ದರೆ ಆಗುತ್ತಾರೆ. ಅವರನ್ನ ಮುಖ್ಯಮಂತ್ರಿಯಾಗಿ ನೋಡುವ ಭಾಗ್ಯ ನನಗೂ ಇದೆ’ ಎಂದಿದ್ದಾರೆ.

ಹಾಗಂತ ಮುಖ್ಯಮಂತ್ರಿಯಾಗುವುದಕ್ಕೆ ಯಾವುದೇ ಪ್ರಯತ್ನ ಮಾಡುತ್ತಿಲ್ಲ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲೇ ನಾವು ಮುಂದಿನ ಚುನಾವಣೆಗೂ ಹೋಗುತ್ತೇವೆ. ಸಿಎಂ ಆಗುವ ಬಗ್ಗೆ ಎಲ್ಲಾ ನಾಯಕರೂ ಅವರವರ ಅಭಿಪ್ರಾಯವನ್ನು ಹೈಕಮಾಂಡ್ ಗೆ ಹೇಳಿದ್ದಾರೆ. ಆ ಹಕ್ಕು ಅವರಿಗಿದೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments