Select Your Language

Notifications

webdunia
webdunia
webdunia
webdunia

ಸಿದ್ದರಾಮಯ್ಯ, ಶಿವಕುಮಾರ್ ಬ್ರೇಕ್‌ಫಾಸ್ಟ್ ಭೇಟಿ ಬಗ್ಗೆ ಡಿಕೆ ಸುರೇಶ್ ಸ್ಪೋಟಕ ಹೇಳಿಕೆ

dk suresh
ನವದೆಹಲಿ: ಪಕ್ಷದೊಳಗಿನ ಅಧಿಕಾರದ ಊಹಾಪೋಹಗಳಿಗೆ ತೆರೆ ಎಳೆದಿದ್ದು, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಲು ಬದ್ಧರಾಗಿದ್ದಾರೆ ಎಂದು ಕಾಂಗ್ರೆಸ್ ನಾಯಕ ಡಿಕೆ ಸುರೇಶ್ ಹೇಳಿದರು. ‌‌

ಶನಿವಾರ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಶಿವಕುಮಾರ್ ಬ್ರೇಕ್‌ಫಾಸ್ಟ್ ಭೇಟಿಯನ್ನು ಸ್ವಾಗತಿಸಿದ ಅವರು, ಇಬ್ಬರೂ ನಾಯಕರು ರಾಜ್ಯದ ಜನತೆಗೆ ಭರವಸೆ ನೀಡಿದ್ದು, ಅದನ್ನು ಈಡೇರಿಸಬೇಕಿದೆ ಎಂದರು. 

ಇಬ್ಬರು ನಾಯಕರು ಸ್ಪಷ್ಟವಾಗಿ ಹೇಳಿರುವಂತೆ ಅಧಿಕಾರ ಹಂಚಿಕೆ ಕುರಿತು ಯಾವುದೇ ಮಾತುಕತೆ ನಡೆದಿಲ್ಲ, ಹೀಗಾಗಿ ಚರ್ಚೆ ಅಗತ್ಯವಿಲ್ಲ ಎಂದು ಅವರು ಹೇಳಿದರು. 

ಇದು ಅವರ ಕರ್ತವ್ಯವೂ ಆಗಿದೆ, ಏಕೆಂದರೆ ಅವರು ರಾಜ್ಯದ ಜನರಿಗೆ ಭರವಸೆ ನೀಡಿದ್ದು, ಅವರು ನುಡಿದಂತೆ ನಡೆಯಬೇಕು, ಸಿಎಂ ಮತ್ತು ಡಿಸಿಎಂ ಭರವಸೆಗಳನ್ನು ಈಡೇರಿಸುತ್ತಾರೆ ಎಂದು ನನಗೆ ಖಚಿತವಾಗಿದೆ ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ಭ್ರಾತೃತ್ವ ಬೇರೂರಿರುವ ಭಾರತದಲ್ಲಿ ವಿವಾದ ತರವಲ್ಲ: ಮೋಹನ್ ಭಾಗವತ್