Publish Date: Tue, 20 Jan 2026 (16:32 IST)
Updated Date: Tue, 20 Jan 2026 (16:34 IST)
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವಿನ ಪೈಪೋಟಿ ಇನ್ನೂ ತಣ್ಣಗಾಗಿಲ್ಲ. ಸಿದ್ದರಾಮಯ್ಯ ಅವರು ಬಜೆಟ್‌ಗಾಗಿ ತಯಾರಿ ನಡೆಸುತ್ತಿದ್ದರೆ, ಡಿಕೆ ಶಿವಕುಮಾರ್ ಅವರು ದಾವೋಸ್‌ಗೆ ಪ್ರಯಾಣ ಬೆಳೆಸಿದ್ದಾರೆ.
ಈ ನಡುವೆ ಸಂಸದ ಡಿಕೆ ಸುರೇಶ್ ಅವರ ಹೇಳಿಕೆ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ ವರಿಷ್ಠ, ಲೋಕಸಭೆ ನಾಯಕ ರಾಹುಲ್ ಗಾಂಧಿ ಅವರು ತಾಳ್ಮೆಯಿಂದ ಇರಿ ಎಂದು ಹೇಳಿದ್ದಾರೆ. ಮೈಸೂರಿಗೆ ರಾಹುಲ್ ಗಾಂಧಿ ಬಂದಾಗಲೂ ಡಿಕೆ ಶಿವಕುಮಾರ್ ಜತೆ ಅದೇ ಮಾತನನ್ನು ಹೇಳಿದ್ದಾರೆ.
ಸೂಕ್ತ ಸಂದರ್ಭದಲ್ಲಿ, ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಪಕ್ಷ ಹಿತದೃಷ್ಟಿಯಿಂದ, ಶಾಸಕರ ಹಿತದೃಷ್ಟಿಯಿಂದ ಕಾಯುತ್ತಿದ್ದೇವೆ ಎಂದು ಡಿಕೆ ಸುರೇಶ್ ಹೇಳಿದರು.