Webdunia - Bharat's app for daily news and videos

Install App

ಡಾ ಸಿಎನ್ ಮಂಜುನಾಥ್ ‘ಜಾಣ ಅಳಿಯ’ನೆಂದ ಡಿಕೆ ಸುರೇಶ್

Krishnaveni K
ಗುರುವಾರ, 14 ಮಾರ್ಚ್ 2024 (16:03 IST)
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ತಮ್ಮ ಎದುರಾಳಿಯಾಗಿ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷದಿಂದ ಕಣಕ್ಕಿಳಿಯುತ್ತಿರುವ ಡಾ ಸಿಎನ್ ಮಂಜುನಾಥ್ ಗೆ ಕಾಂಗ್ರೆಸ್ ಅಭ್ಯರ್ಥಿ, ಸಂಸದ ಡಿಕೆ ಸುರೇಶ್ ಟಾಂಗ್ ಕೊಟ್ಟಿದ್ದಾರೆ.

ಜಯದೇವ ಆಸ್ಪತ್ರೆಯ ಮಾಜಿ ನಿರ್ದೇಶಕ ಡಾ ಸಿಎನ್ ಮಂಜುನಾಥ್ ಇಂದು ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಕೇಸರು ಶಾಲು ಹಾಕಿ ಬಿಜೆಪಿ ಪಕ್ಷಕ್ಕೆ ಸ್ವಾಗತಿಸಲಾಯಿತು. ನಿನ್ನೆ ಲೋಕಸಭೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವಾಗ ಡಾ ಸಿಎನ್ ಮಂಜುನಾಥ್ ಹೆಸರೂ ಘೋಷಣೆಯಾಗಿತ್ತು.

ಇದೀಗ ತಮ್ಮ ವಿರುದ್ಧ ಮಂಜುನಾಥ್ ಕಣಕ್ಕಿಳಿಯುವ ವಿಚಾರ ಅಧಿಕೃತವಾಗುತ್ತಿದ್ದಂತೇ ಡಿಕೆ ಸುರೇಶ್ ಟಾಂಗ್ ಕೊಟ್ಟಿದ್ದಾರೆ. ಡಾ ಸಿಎನ್ ಮಂಜುನಾಥ್ ಜಾಣ ಅಳಿಯ. ಜೆಡಿಎಸ್ ಪಕ್ಷ ಅವರ ಮಾವ (ಎಚ್ ಡಿ ದೇವೇಗೌಡ)ನದ್ದೇ ಆದರೂ ಆ ಪಕ್ಷಕ್ಕೆ ಭವಿಷ್ಯವಿಲ್ಲ ಎಂದು ಅವರಿಗೆ ಗೊತ್ತಿದೆ. ಅದಕ್ಕೇ ಬಿಜೆಪಿಗೆ ಸೇರಿದ್ದಾರೆ ಎಂದು ಡಿಕೆ ಸುರೇಶ್ ಟೀಕಿಸಿದ್ದಾರೆ.

ಇದಕ್ಕೆ ತಿರುಗೇಟು ನೀಡಿರುವ ಜೆಡಿಎಸ್ ಜಾಣ ಅಳಿಯನಾದರೂ ತೊಂದರೆಯಿಲ್ಲ ಆದರೆ ನಿಮ್ಮಂತೆ ಇನ್ನೊಬ್ಬರನ್ನು ಸುಲಿಗೆ ಮಾಡಿ ಬದುಕುವಂತಾಗಬಾರದು ಎಂದಿದೆ. ಇನ್ನೊಂದೆಡೆ, ರಾಜಕೀಯಕ್ಕೆ ಅಧಿಕೃತವಾಗಿ ಪ್ರವೇಶ ಮಾಡಿದರೂ ತಾನು ಯಾರ ಬಗ್ಗೆಯೂ ಟೀಕೆ ಮಾಡಲು ಹೋಗುವುದಿಲ್ಲ ಎಂದು ಮಂಜುನಾಥ್ ಹೇಳಿದ್ದಾರೆ. ಮೋದಿ, ದೇವೇಗೌಡರಂತಹ ಹಿರಿಯರ ಒಳ್ಳೆಯ ಕೆಲಸ, ಕುಮಾರಸ್ವಾಮಿ ನಾಯಕತ್ವದ ಮಾರ್ಗದರ್ಶನದಲ್ಲಿ ನಡೆಯಲಿದ್ದೇನೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments