ಕುಮಾರಸ್ವಾಮಿ ಮಂಡ್ಯ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡ್ತಾರೆ: ಡಿಕೆ ಸುರೇಶ್ ಬಾಂಬ್

Krishnaveni K
ಬುಧವಾರ, 12 ಜೂನ್ 2024 (12:22 IST)
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಭಾರೀ ಅಂತರದಿಂದ ಗೆದ್ದು ಕೇಂದ್ರದಲ್ಲಿ ಸಚಿವರಾಗಿರುವ ಎಚ್ ಡಿ ಕುಮಾರಸ್ವಾಮಿ ತಮ್ಮ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಡಿಕೆ ಸುರೇಶ್ ಬಾಂಬ್ ಸಿಡಿಸಿದ್ದಾರೆ.

ಈ ಬಾರಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಅನುಭವಿಸಿದ್ದ ಮಾಜಿ ಸಂಸದ ಡಿಕೆ ಸುರೇಶ್ ಚನ್ನಪಟ್ಟಣ ಕ್ಷೇತ್ರದಿಂದ ಉಪ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಅದನ್ನು ಅವರು ತಳ್ಳಿ ಹಾಕಿದ್ದರು. ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ ಶಾಸಕರಾಗಿದ್ದರು. ಆದರೆ ಅವರೀಗ ಲೋಕಸಭೆಗೆ ಸ್ಪರ್ಧಿಸಿ ಗೆದ್ದಿರುವುದರಿಂದ ಚನ್ನಪಟ್ಟಣ ಕ್ಷೇತ್ರವನ್ನು ಬಿಟ್ಟುಕೊಡಲಿದ್ದಾರೆ.

ಆದರೆ ಇದುವರೆಗೆ ತಮ್ಮ ಶಾಸಕ ಸ್ಥಾನಕ್ಕೆ ಕುಮಾರಸ್ವಾಮಿ ರಾಜೀನಾಮೆ ನೀಡಿಲ್ಲ. ಹೀಗಾಗಿ ಡಿಕೆ ಸುರೇಶ್, ಕುಮಾರಸ್ವಾಮಿ ಮಂಡ್ಯ ಕ್ಷೇತ್ರಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಟಾಂಗ್ ಕೊಟ್ಟಿದ್ದಾರೆ. ಬಹುಶಃ ಅವರಿಗೆ ಚನ್ನಪಟ್ಟಣ ಬಿಡುವ ಮನಸ್ಸಿಲ್ಲ. ಹೀಗಾಗಿ ಮಂಡ್ಯ ಸಂಸದ ಸ್ಥಾನಕ್ಕೇ ರಾಜೀನಾಮೆ ನೀಡಲಿದ್ದಾರೆ  ಎಂದು ವ್ಯಂಗ್ಯ ಮಾಡಿದ್ದಾರೆ.

ಕುಮಾರಸ್ವಾಮಿಯವರ ಅನೇಕ ಭಾಷಣಗಳನ್ನು ನಾನು ಕೇಳಿದ್ದೇನೆ. ಅವರು ಯಾವಾಗಲೂ ಚನ್ನಪಟ್ಟಣ ನನಗೆ ತವರಿದ್ದಂತೆ ಹೇಳುತ್ತಿದ್ದರು. ಹೀಗಾಗಿ ಈ ಕ್ಷೇತ್ರವನ್ನು ಬಿಡಲು ಅವರಿಗೆ ಮನಸ್ಸಿಲ್ಲ. ಹೀಗಾಗಿ ಮಂಡ್ಯ ಎಂಪಿ ಸ್ಥಾನಕ್ಕೇ ರಾಜೀನಾಮೆ ನೀಡಬಹುದು ಎಂದು ಸುರೇಶ್ ಟಾಂಗ್ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿ ವರ್ಷದಂತೆ ಈ ಬಾರಿಯೂ ದೀಪಾವಳಿಗೆ ಈ ಕೆಲಸ ಮಾಡಲು ಮರೆಯದ ನರೇಂದ್ರ ಮೋದಿ

ದೀಪೋತ್ಸವ ಅಯೋಧ್ಯೆಗೆ ಹೊಸ ಜಾಗತಿಕ ಗುರುತನ್ನು ನೀಡಿದೆ: ಯೋಗಿ ಆದಿತ್ಯನಾಥ್‌

ನನ್ನ ಮಗನನ್ನು ಸ್ವಯಂಸೇವಕನಾಗಿ ಮಾಡುತ್ತೇನೆಯೇ ವಿನಾ ಶಾಸಕನಾಗಿಯಲ್ಲ: ಸುನಿಲ್ ಕುಮಾರ್ ಕೌಂಟರ್‌

ಪಟಾಕಿ ಹಚ್ಚಲು ಸಿದ್ಧತೆ ನಡೆಸುತ್ತಿರುವಾಗಲೇ ದೆಹಲಿ ಮಂದಿಗೆ ಬಿಗ್ ಶಾಕ್‌

ರಷ್ಯಾದಿಂದ ಭಾರತ ತೈಲ ಖರೀದಿ ವಿಚಾರ: ಮತ್ತೆ ದುಬಾರಿ ಸುಂಕದ ಬೆದರಿಕೆ ನೀಡಿದ ಡೊನಾಲ್ಡ್‌ ಟ್ರಂಪ್‌

ಮುಂದಿನ ಸುದ್ದಿ
Show comments