Select Your Language

Notifications

webdunia
webdunia
webdunia
webdunia

ತಮ್ಮ ಡಿಕೆ ಸುರೇಶ್ ಗೆಲ್ಲಿಸುವುದು ಡಿಕೆ ಶಿವಕುಮಾರ್ ಗೆ ಮರ್ಯಾದೆ ಪ್ರಶ್ನೆ

DK Shivakumar

Krishnaveni K

ಧರ್ಮಸ್ಥಳ , ಮಂಗಳವಾರ, 26 ಮಾರ್ಚ್ 2024 (15:22 IST)
ಧರ್ಮಸ್ಥಳ: ಲೋಕಸಭೆ ಚುನಾವಣೆಗೆ ಮೊದಲು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ದೇವಾಲಯಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಈ ಬಾರಿ ಲೋಕಸಭೆ ಚುನಾವಣೆ ಅವರಿಗೆ ಪ್ರತಿಷ್ಠೆಯ ವಿಚಾರವಾಗಿದೆ.

ನಿನ್ನೆ ರಾತ್ರಿ ಧರ್ಮಸ್ಥಳಕ್ಕೆ ಬಂದಿಳಿದ ಅವರು ಇಂದು ಬೆಳಿಗ್ಗೆ ದೇವರ ದರ್ಶನ ಪಡೆದಿದ್ದಾರೆ. ಇಂದು ರುದ್ರಾಭಿಷೇಕ ಸೇವೆ ಸಲ್ಲಿಸಿ ಮಂಜುನಾಥ ಸ್ವಾಮಿಗೆ ಚುನಾವಣೆಯಲ್ಲಿ ಗೆಲ್ಲಿಸಿಕೊಡುವಂತೆ ಪ್ರಾರ್ಥನೆ ಸಲ್ಲಿಸಿದ್ದಾರೆ. ಬಳಿಕ ಕೊಲ್ಲೂರು ದೇವಾಲಯಕ್ಕೆ ತೆರಳಿದ್ದಾರೆ.

ಡಿಕೆ ಶಿವಕುಮಾರ್ ಜೊತೆ ಅವರ ಸಂಗಡಿಗರೂ ಇದ್ದರು. ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಡಿಕೆ ಶಿವಕುಮಾರ್ ಸಹೋದರ ಡಿಕೆ ಸುರೇಶ್ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಕಣಕ್ಕಿಳಿಯುತ್ತಿದ್ದಾರೆ. ಅವರಿಗೆ ಎದುರಾಳಿಯಾಗಿ ಬಿಜೆಪಿಯಿಂದ ಡಾ ಸಿಎನ್ ಮಂಜುನಾಥ್ ಸ್ಪರ್ಧಿಸುತ್ತಿದ್ದಾರೆ. ಹೀಗಾಗಿ ಡಿಕೆಶಿಗೆ ಸಹೋರನನ್ನು ಗೆಲ್ಲಿಸುವುದು ಪ್ರತಿಷ್ಠೆಯ ವಿಚಾರವಾಗಿದೆ.

ಕಳೆದ ಎರಡು ಬಾರಿ ಗೆಲುವು ಸಾಧಿಸಿದ್ದರೂ ಡಿಕೆ ಸುರೇಶ್ ಗೆ ಈ ಬಾರಿ ಗೆಲ್ಲುವುದು ಅಷ್ಟು ಸುಲಭವಲ್ಲ. ಕಳಂಕ ರಹಿತ, ತಮ್ಮ ವೈದ್ಯಕೀಯ ಸೇವೆಯಿಂದಲೇ ಜನರ ಪ್ರೀತಿ ಸಂಪಾದಿಸಿರುವ ಡಾ ಸಿಎನ್ ಮಂಜುನಾಥ್ ವಿರುದ್ಧ ಗೆಲ್ಲುವುದು ಡಿಕೆ ಬ್ರದರ್ಸ್ ಗೆ ಪ್ರತಿಷ್ಠೆಯ ವಿಚಾರ. ಅಲ್ಲದೆ, ರಾಜ್ಯದಲ್ಲಿ ತಮ್ಮದೇ ಪಕ್ಷ ಅಧಿಕಾರದಲ್ಲಿರುವಾಗ ಡಿಕೆ ಸುರೇಶ್ ಸೋತರೆ ಅದು ಡಿಕೆ ಶಿವಕುಮಾರ್ ಗೆ ಮರ್ಯಾದೆ ಪ್ರಶ್ನೆ.

Share this Story:

Follow Webdunia kannada

ಮುಂದಿನ ಸುದ್ದಿ

ಧರ್ಮ ಯುದ್ಧಕ್ಕೂ ಮುನ್ನಾ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದೇನೆ: ಡಿ.ಕೆ.ಶಿವಕುಮಾರ್‌