ತಮ್ಮ ಡಿಕೆ ಸುರೇಶ್ ಗೆಲ್ಲಿಸುವುದು ಡಿಕೆ ಶಿವಕುಮಾರ್ ಗೆ ಮರ್ಯಾದೆ ಪ್ರಶ್ನೆ

Krishnaveni K
ಮಂಗಳವಾರ, 26 ಮಾರ್ಚ್ 2024 (15:22 IST)
ಧರ್ಮಸ್ಥಳ: ಲೋಕಸಭೆ ಚುನಾವಣೆಗೆ ಮೊದಲು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ದೇವಾಲಯಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಈ ಬಾರಿ ಲೋಕಸಭೆ ಚುನಾವಣೆ ಅವರಿಗೆ ಪ್ರತಿಷ್ಠೆಯ ವಿಚಾರವಾಗಿದೆ.

ನಿನ್ನೆ ರಾತ್ರಿ ಧರ್ಮಸ್ಥಳಕ್ಕೆ ಬಂದಿಳಿದ ಅವರು ಇಂದು ಬೆಳಿಗ್ಗೆ ದೇವರ ದರ್ಶನ ಪಡೆದಿದ್ದಾರೆ. ಇಂದು ರುದ್ರಾಭಿಷೇಕ ಸೇವೆ ಸಲ್ಲಿಸಿ ಮಂಜುನಾಥ ಸ್ವಾಮಿಗೆ ಚುನಾವಣೆಯಲ್ಲಿ ಗೆಲ್ಲಿಸಿಕೊಡುವಂತೆ ಪ್ರಾರ್ಥನೆ ಸಲ್ಲಿಸಿದ್ದಾರೆ. ಬಳಿಕ ಕೊಲ್ಲೂರು ದೇವಾಲಯಕ್ಕೆ ತೆರಳಿದ್ದಾರೆ.

ಡಿಕೆ ಶಿವಕುಮಾರ್ ಜೊತೆ ಅವರ ಸಂಗಡಿಗರೂ ಇದ್ದರು. ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಡಿಕೆ ಶಿವಕುಮಾರ್ ಸಹೋದರ ಡಿಕೆ ಸುರೇಶ್ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಕಣಕ್ಕಿಳಿಯುತ್ತಿದ್ದಾರೆ. ಅವರಿಗೆ ಎದುರಾಳಿಯಾಗಿ ಬಿಜೆಪಿಯಿಂದ ಡಾ ಸಿಎನ್ ಮಂಜುನಾಥ್ ಸ್ಪರ್ಧಿಸುತ್ತಿದ್ದಾರೆ. ಹೀಗಾಗಿ ಡಿಕೆಶಿಗೆ ಸಹೋರನನ್ನು ಗೆಲ್ಲಿಸುವುದು ಪ್ರತಿಷ್ಠೆಯ ವಿಚಾರವಾಗಿದೆ.

ಕಳೆದ ಎರಡು ಬಾರಿ ಗೆಲುವು ಸಾಧಿಸಿದ್ದರೂ ಡಿಕೆ ಸುರೇಶ್ ಗೆ ಈ ಬಾರಿ ಗೆಲ್ಲುವುದು ಅಷ್ಟು ಸುಲಭವಲ್ಲ. ಕಳಂಕ ರಹಿತ, ತಮ್ಮ ವೈದ್ಯಕೀಯ ಸೇವೆಯಿಂದಲೇ ಜನರ ಪ್ರೀತಿ ಸಂಪಾದಿಸಿರುವ ಡಾ ಸಿಎನ್ ಮಂಜುನಾಥ್ ವಿರುದ್ಧ ಗೆಲ್ಲುವುದು ಡಿಕೆ ಬ್ರದರ್ಸ್ ಗೆ ಪ್ರತಿಷ್ಠೆಯ ವಿಚಾರ. ಅಲ್ಲದೆ, ರಾಜ್ಯದಲ್ಲಿ ತಮ್ಮದೇ ಪಕ್ಷ ಅಧಿಕಾರದಲ್ಲಿರುವಾಗ ಡಿಕೆ ಸುರೇಶ್ ಸೋತರೆ ಅದು ಡಿಕೆ ಶಿವಕುಮಾರ್ ಗೆ ಮರ್ಯಾದೆ ಪ್ರಶ್ನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇಂದ್ರ ಬಜೆಟ್ ರೈತರ ಆದಾಯವನ್ನು ಹೆಚ್ಚಿಸುತ್ತದೆ: ಪ್ರಧಾನಿ ಮೋದಿ ವಿಶ್ವಾಸ

ರೋಹಿತ್ ಶೆಟ್ಟಿ ಮನೆ ಮೇಲೆ ಗುಂಡಿನ ದಾಳಿ ಬೆನ್ನಲ್ಲೇ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಎಚ್ಚರಿಕೆ

ನೆಚ್ಚಿನ ರೆಸಾರ್ಟ್‌ನಲ್ಲೇ ಮಣ್ಣಾದ ಸಿಜೆ ರಾಯ್‌

ಇಂದೋರ್‌ ಮ್ಯಾರಥಾನ್‌ ವೇಳೆ 25 ವರ್ಷದ ಓಟಗಾರ ಹೃದಯಾಘಾತಕ್ಕೆ ಬಲಿ

ಭಾರತದ ರಕ್ಷಣಾ ಸಾಮರ್ಥ್ಯಗಳನ್ನು ಮತ್ತಷ್ಟು ಬಲಗೊಂಡಿದೆ: ರಾಜನಾಥ್ ಸಿಂಗ್

ಮುಂದಿನ ಸುದ್ದಿ
Show comments