Select Your Language

Notifications

webdunia
webdunia
webdunia
webdunia

ನೂತನ ಸಂಸದ ಡಾ.ಮಂಜುನಾಥ್‌ಗೆ ಒಳ್ಳೆಯದಾಗಲಿ ಎಂದು ಶುಭಕೋರಿದ ಡಿಕೆ ಸುರೇಶ್

dk suresh

sampriya

ಬೆಂಗಳೂರು , ಮಂಗಳವಾರ, 4 ಜೂನ್ 2024 (17:43 IST)
Photo By X
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ  ಸೋಲು ಅನುಭವಿಸಿದ ಡಿಕೆ ಸುರೇಶ್‌ ಅವರು  ನೂತನ ಸಂಸದ ಡಾ.ಮಂಜುನಾಥ್‌ ಅವರಿಗೆ ಅಭಿನಂದನೆ ಸಲ್ಲಿಸಿ, ತಮ್ಮ ಅಧಿಕಾರದ ಅವಧಿಯಲ್ಲಿ ಕ್ಷೇತ್ರಕ್ಕೆ ಒಳ್ಳೆಯ ಕೆಲಸವಾಗಲಿ ಎಂದು ಶುಭಕೋರಿದರು.

ಮಾಧ್ಯಮದ ಜತೆ ಮಾತನಾಡಿದ ಅವರು, ನನ್ನ ಕ್ಷೇತ್ರದ ಮತದಾರರಿಗೆ ಧನ್ಯವಾದ ಸಲ್ಲಿಸುತ್ತೇನೆ. ನನಗೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ 3 ಬಾರಿ ಸಂಸದನಾಗಿ ಕೆಲಸ ಮಾಡಲು ಅವಕಾಶ ನೀಡಿದ್ದಾರೆ. ನಾಲ್ಕನೇ ಬಾರಿಯ ಅಗ್ನಿ ಪರೀಕ್ಷೆಯಲ್ಲಿ ವಿರಾಮ ಕೊಟ್ಟಿದ್ದಾರೆ. ನನ್ನ ಪಕ್ಷಕ್ಕೆ ಕೆಲಸ ಮಾಡಿದ ನಾಯಕರಿಗೆ, ಕಾರ್ಯಕರ್ತರಿಗೆ ಧನ್ಯವಾದಗಳು. 

ಕನ್ನಡಿಗರ ಧ್ವನಿಯಾಗಿ ಕೆಲಸ ಮಾಡಿದ್ದೇನೆ. ಅದರ ಗಮನದಲ್ಲಿಟ್ಟು ಮತದಾರ ಬಂಧುಗಳು ಹೊಸ ನಾಯಕತ್ವಕ್ಕೆ ಅವಕಾಶ ಕೊಟ್ಟಿದ್ದಾರೆ. ಮಂಜುನಾಥ್‌ ಅವರು ಚೆನ್ನಾಗಿ ಕೆಲಸ ಮಾಡಲಿ, ರಾಜ್ಯಕ್ಕೆ, ಕ್ಷೇತ್ರಕ್ಕೆ ಒಳ್ಳೆಯದಾಗಲಿ. ನಾನು ಕ್ಷೇತ್ರದ ಕಾರ್ಯಕರ್ತರನ್ನು ಜನರ ಜತೆ ಸಾಮಾನ್ಯ ಪ್ರಜೆಯಾಗಿ, ಪಕ್ಷದ ಕಾರ್ಯಕರ್ತನಾಗಿ ಅವರ ಜತೆ ಇರುತ್ತೇನೆ.

ಈ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ತೀರ್ಮಾನವೇ ಅಂತಿಮ. ಅದನ್ನು ನಾನು ಗೌರವದಿಂದ ಸ್ವಾಗತಿಸಿದ್ದೇನೆ. ನೂತನ ಸಂಸದರಾಗಿ ಆಯ್ಕೆಯಾಗಿರುವ ಡಾ,ಮಂಜುನಾಥ್‌  ಅವರಿಗೆ ನನ್ನ ಶುಭಾಶಯಗಳು. ಅವರ ಅಧಿಕಾರದ ಅವಧಿಯಲ್ಲಿ ಕ್ಷೇತ್ರದಲ್ಲಿ ಒಳ್ಳೆಯ ಕೆಲಸವನ್ನು ಮಾಡಲಿ ಎಂದು ಆಶೀಸುತ್ತೇನೆ.



Share this Story:

Follow Webdunia kannada

ಮುಂದಿನ ಸುದ್ದಿ

Lok Sabha election 2024 result: ವಾರಣಾಸಿಯಲ್ಲಿ ಮೋದಿ ಹ್ಯಾಟ್ರಿಕ್ ಗೆಲುವು