Select Your Language

Notifications

webdunia
webdunia
webdunia
webdunia

ಡಿಕೆಶಿ ಹೌಸಿಂಗ್ ಸೊಸೈಟಿ ಹಗರಣದಲ್ಲಿ ಭಾಗಿ: ಎಚ್‌ಡಿಕೆ ಆರೋಪ

ಡಿಕೆಶಿ ಹೌಸಿಂಗ್ ಸೊಸೈಟಿ ಹಗರಣದಲ್ಲಿ ಭಾಗಿ: ಎಚ್‌ಡಿಕೆ ಆರೋಪ
ಬೆಂಗಳೂರು , ಸೋಮವಾರ, 24 ನವೆಂಬರ್ 2014 (19:13 IST)
ಹೌಸಿಂಗ್ ಸೊಸೈಟಿ ಹಗರಣದಲ್ಲಿ ಇಂಧನಸಚಿವ ಡಿಕೆಶಿ ಭಾಗಿಯಾಗಿದ್ದಾರೆ ಎಂದು ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಕುಮಾರಸ್ವಾಮಿ ಶಾಂತಿನಗರ ಹೌಸಿಂಗ್ ಸೊಸೈಟಿ ಹಗರಣದಲ್ಲಿ 66 ಎಕರೆ ಭೂಮಿ ಖರೀದಿಯಲ್ಲಿ ಡಿಕೆಶಿ ಪಾತ್ರವಹಿಸಿದ್ದಾರೆ ಎಂದು ಕುಮಾರಸ್ವಾಮಿ ಆರೋಪಿಸಿದರು.

ಈ ಕುರಿತು ದಾಖಲೆಗಳನ್ನು ಶೀಘ್ರವೇ ಬಿಡುಗಡೆ ಮಾಡುವುದಾಗಿ ಹೇಳಿದರು. ಸಿಎಂ ಸಿದ್ದರಾಮಯ್ಯ ಭ್ರಷ್ಟಾಚಾರದ ಬಗ್ಗೆ ಸಾಕಷ್ಟು ಮಾತಾಡ್ತಾರೆ. ಆದರೆ ಇಂಥವರನ್ನು ಕೂಡ ಸಂಪುಟದಲ್ಲಿ ಇಟ್ಟುಕೊಂಡಿದ್ದಾರೆ.

ಆದ್ದರಿಂದ ಇವರ ಬಗ್ಗೆ ಕೂಡ ತನಿಖೆ ಮಾಡಲಿ ಎಂದು ಕುಮಾರಸ್ವಾಮಿ ಒತ್ತಾಯಿಸಿದರು. ಈ ಬಗ್ಗೆ ಸರ್ಕಾರ ಸಿಬಿಐ ತನಿಖೆ ನಡೆಸಬೇಕು ಎಂದು ಅವರು ಒತ್ತಾಯಿಸಿದರು.  

Share this Story:

Follow Webdunia kannada