ಮಧುಕರ್ ಶೆಟ್ಟಿ ನಿಧನದ ಕುರಿತು ಅನುಮಾನ ವ್ಯಕ್ತಪಡಿಸಿದ ಡಿಕೆಶಿ!

Webdunia
ಶನಿವಾರ, 29 ಡಿಸೆಂಬರ್ 2018 (13:23 IST)
ಬೆಂಗಳೂರು: ದಕ್ಷ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಹೆಚ್1ಎನ್1 ಜ್ವರದಿಂದ ಬಳಲುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ರಾತ್ರಿ ಹೈದ್ರಾಬಾದ್‍ನ ಕಾಂಟಿನೆಂಟಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಇದೀಗ ಇವರ ಅಕಾಲಿಕ ಮರಣಕ್ಕೆ ಸಚಿವ ಡಿಕೆ ಶಿವಕುಮಾರ್ ಸಂಶಯ ವ್ಯಕ್ತಪಡಿಸಿದ್ದಾರೆ.


ಮಧುಕರ್ ಶೆಟ್ಟಿ  ಅವರ ಸಾವಿಗೆ ಸಂತಾಪ ಸೂಚಿಸಿ ಪ್ರತಿಕ್ರಿಯೆ ನೀಡಿದ ಅವರು, ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದರು. ಮಧುಕರ್ ಶೆಟ್ಟಿ ಅವರ ಸಾವು ಸಹಜವಾಗಿದೆಯೇ, ಅಸಹಜ ಸಾವೇ ಎಂಬ ಬಗ್ಗೆ ತನಿಖೆ ಮಾಡುವ ಅಗತ್ಯವಿದೆ ಎಂದು ಹೇಳಿದರು.

ಮಧುಕರ್ ಶೆಟ್ಟಿ ನನಗೆ ಹತ್ತಿರದಿಂದ ಪರಿಚಯ. ನಮ್ಮಲ್ಲಿ ಕೆಲಸ ಮಾಡುತ್ತಿದ್ದರು. ನಿನ್ನೆ ರಾತ್ರಿ ಅವರ ನಿಧನ ಸುದ್ದಿ ಕೇಳಿ ಆಶ್ಚರ್ಯವಾಯ್ತು. ಅವರ ನಿಧನ ಸ್ವಾಭಾವಿಕವಾನಾ ಅಂತ ತನಿಖೆ ಮಾಡಬೇಕಾಗಿದೆ. ಪೊಲೀಸ್ ಇಲಾಖೆಗೆ ಅವರೊಂದು ದೊಡ್ಡ ಆಸ್ತಿ ಆಗಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ. ದೇವರು ಅವರ ಕುಟುಂಬಕ್ಕೆ ಧೈರ್ಯ ಕೊಡಲಿ ಅಂತ ಡಿಕೆಶಿ ಸಂತಾಪ ಸೂಚಿಸಿದ್ದಾರೆ.


ರಾಜ್ಯದ ಒಬ್ಬ ಅಧಿಕಾರಿ ಹೊರ ರಾಜ್ಯದಲ್ಲಿ ನಿಧನ ಹೊಂದಿದರೆ ಆ ಬಗ್ಗೆ ತನಿಖೆ ನಡೆಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಡಿಕೆಶಿ ಹೇಳಿಕೆ ನೀಡಿದ್ದಾರೆ. 



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂರು ವರ್ಷಗಳಿಂದ ನಾನು ಟೀಕೆ ಮಾಡಿದ್ದೇನೆ. ಈಗ ಅದಕ್ಕೆ ಸಮಯವಲ್ಲ

ಹಾಸನ ಜಿಲ್ಲೆಯ ಏಕೈಕ ಕೈ ಶಾಸಕ ಕೆಎಂ ಶಿವಲಿಂಗೇಗೌಡಗೆ ಸಚಿವ ಸ್ಥಾನ ನೀಡಲು ರಾಹುಲ್‌ಗೆ ಪತ್ರ

ಸಿದ್ದರಾಮಯ್ಯ ಈ ಮಾತು ಡಿಕೆ ಶಿವಕುಮಾರ್‌ಗೆ ಎಚ್ಚರಿಕೆ ಗಂಟೆ: ಡಿಕೆ ಸುಧಾಕರ್‌

ಡೇಟ್ ಫಿಕ್ಸ್ ಆಗದಿದ್ದರೂ ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ನಡೆಯುತ್ತಿದೆ ಭಾರೀ ಸಿದ್ಧತೆ

ಮಹಾರಾಷ್ಟ್ರ ನಕಲಿ ಮದ್ಯ ಸೇವನೆ ಪ್ರಕರಣ: 48ಗಂಟೆಯಲ್ಲಿ ಮೃತರ ಸಂಖ್ಯೆ 18ಕ್ಕೆ ಏರಿಕೆ

ಮುಂದಿನ ಸುದ್ದಿ
Show comments