ಸಿಎಂ ಇತ್ಯರ್ಥಕ್ಕೆ ಡಿಕೆಶಿ ಬಿಗಿಪಟ್ಟು’

Webdunia
ಬುಧವಾರ, 17 ಮೇ 2023 (16:50 IST)
ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟಗೊಂಡು ಮೂರು ದಿನಗಳು ಕಳೆದಿವೆ. ಆದರೂ ಬಹುಮತ ಪಡೆದುಕೊಂಡಿರುವ ಕಾಂಗ್ರೆಸ್​ ಇದುವರೆಗೂ ಸಿಎಂ ಯಾರು ಎನ್ನುವುದನ್ನು ಘೋಷಣೆ ಮಾಡಿಲ್ಲ. ಸಿಎಂ ಕುರ್ಚಿಗಾಗಿ ಪಟ್ಟು ಅಂದ್ರೆ ಪಟ್ಟು. ಸಿದ್ದರಾಮಯ್ಯ ಬಿಡುತ್ತಿಲ್ಲ. ಇತ್ತ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಸಹ ಸೈಡಿಗೆ ಸರಿಯುತ್ತಿಲ್ಲ. ಹೀಗಾಗಿ ಹೈಕಮಾಂಡ್​ಗೂ ಸಿಎಂ ಆಯ್ಕೆ ಕಗ್ಗಂಟಾಗಿದೆ. ನಾನು ಅಧ್ಯಕ್ಷನಾಗಿ ಪಕ್ಷ ಅಧಿಕಾರಕ್ಕೆ ತಂದಿರುವ ಕಾರಣ ನನ್ನನ್ನು ಮುಖ್ಯಮಂತ್ರಿ ಮಾಡಬೇಕು. 50:50 ಸೂತ್ರವನ್ನು ನಾನು ಯಾವ ಗ್ಯಾರಂಟಿ ಮೇಲೆ ಒಪ್ಪಲಿ? ರಾಜಸ್ಥಾನ, ಛತ್ತೀಸ್‌ಗಢದಲ್ಲಿ ಏನಾಗಿದೆ ಎಂಬುದು ನನಗೆ ಚೆನ್ನಾಗಿ ತಿಳಿದಿದೆ. ರಾಜಸ್ಥಾನದಲ್ಲಿ 50:50 ಸೂತ್ರ ಒಪ್ಪಿದ್ದ ಪೈಲಟ್‍ಗೆ ಅಧಿಕಾರ ಸಿಕ್ಕಿಲ್ಲ. ಖುದ್ದು ರಾಹುಲ್ ಗಾಂಧಿಯೇ ಭರವಸೆ ನೀಡಿದ್ದರು. ಉಳಿದ ಎರಡೂವರೆ ವರ್ಷದ ಅವಧಿಗೆ ಸಿದ್ದರಾಮಯ್ಯ ಸಿಎಂ ಆಗಲಿ. ಬೇಕಿದ್ದರೆ ಈ ವಿಚಾರದಲ್ಲಿ ನಾನು ಒಪ್ಪಂದಕ್ಕೆ ಸಹಿ ಹಾಕುತ್ತೇನೆ. 2.5 ವರ್ಷ ನಂತರದ ರಾಜೀನಾಮೆಗೆ ಈಗಲೇ ಪತ್ರ ಬರೆಸಿಕೊಳ್ಳಿ. ಸಿದ್ದರಾಮಯ್ಯ ಹೇಳುವ 20 ಶಾಸಕರನ್ನು ಮಂತ್ರಿ ಮಾಡಲು ಸಹ ನಾನು ಸಿದ್ಧ. ಇದಕ್ಕೆ ಸಿದ್ದರಾಮಯ್ಯ ಅವರು ಒಪ್ಪಿಕೊಂಡು ಸಹಿ ಮಾಡಲಿ. ನಾನು ಮಾತಿಗೆ ತಪ್ಪುವವನಲ್ಲ ಅಂತ ಸಿಎಂ ಹುದ್ದೆ ಇತ್ಯರ್ಥವಾಗೋವರೆಗೂ ದೆಹಲಿ ಬಿಟ್ಟು ವಾಪಸ್‌ ಬೆಂಗಳೂರಿಗೆ ಹೋಗಲ್ಲ ಅಂತ ಪಟ್ಟು ಹಿಡಿದಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಅಕ್ಕನನ್ನು ಮಾರಾಟ ಮಾಡ್ಬೇಡಿ, ಅಕ್ಕನ ಮಾತು ಕೇಳಿದ್ರೆ ಕಣ್ಣೀರು ಬರುತ್ತೆ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಮುಂದಿನ ಸುದ್ದಿ
Show comments