ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ದಕ್ಷಿಣ ಕನ್ನಡ ಜಿಲ್ಲೆಯ ಯುವಕನ ಹತ್ಯೆಯನ್ನು ನಾವು ಖಂಡಿಸುತ್ತೇವೆ. ಆದ್ರೆ ಇದರಲ್ಲಿ ಮಧ್ಯ ಪ್ರವೇಶ ಮಾಡಲು ನಾವು ತಯಾರಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಿರುವುದು ಅನ್ಯಾಯ. ಯುವಕನ ಹತ್ಯೆಯನ್ನು ನಾವು ಖಂಡಿಸುತ್ತೇವೆ. ಇದರಲ್ಲಿ ರಾಜಕಾರಣ ಮಾಡಿದ್ರೆ ಉಪಯೋಗ ಇಲ್ಲ. ನಿಮ್ಮ ತಪ್ಪನ್ನು ಒಪ್ಪಿಕೊಳ್ಳಿ ಸಾಕು ಎಂದರು. ಕಾರ್ಯಕರ್ತರ ಆಕ್ರೋಶ, ಜನರ ಆಕ್ರೋಶ ಮೊದಲಿಂದ ಇದೆ. ಪ್ರಾರಂಭದಿಂದ ಒಂದೊಂದೇ ನಿಯಂತ್ರಣ ಮಾಡಿದ್ರೆ ಈ ಘಟನೆ ಆಗುತ್ತಿರಲಿಲ್ಲ. ನೀವು ಏನಾದರೂ ತನಿಖೆ ಮಾಡಿ. ಯಾರನ್ನಾದರೂ ಬ್ಯಾನ್ ಮಾಡಿ. ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಿ ಎಂದು ಸರ್ಕಾರಕ್ಕೆ ಡಿಕೆಶಿ ಆಗ್ರಹಿಸಿದರು.