Select Your Language

Notifications

webdunia
webdunia
webdunia
webdunia

ರಾಮೇಶ್ವರಂ ಕೆಫೆಯ ಸಣ್ಣ ಸ್ಪೋಟ ಎಂದು ಡಿಕೆಶಿ ತನಿಖೆಯ ದಿಕ್ಕು ತಪ್ಪಿಸಿದ್ದರು: ಆರ್‌.ಅಶೋಕ್

ರಾಮೇಶ್ವರಂ ಕೆಫೆಯ ಸಣ್ಣ ಸ್ಪೋಟ ಎಂದು ಡಿಕೆಶಿ ತನಿಖೆಯ ದಿಕ್ಕು ತಪ್ಪಿಸಿದ್ದರು: ಆರ್‌.ಅಶೋಕ್

Sampriya

ಬೆಂಗಳೂರು , ಶನಿವಾರ, 13 ಏಪ್ರಿಲ್ 2024 (18:58 IST)
ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಆರೋಪಿಗಳನ್ನು ರಕ್ಷಿಸಲು ಕಾಂಗ್ರೆಸ್ ಯತ್ನಿಸಿತ್ತು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದರು.

ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 'ರಾಮೇಶ್ವರ ಕೆಫೆಯಲ್ಲಿ ಬಾಂಬ್ ಸ್ಫೋಟದ ನಂತರ ಸ್ಥಳಕ್ಕೆ ಭೇಟಿ ನೀಡಿದ ಡಿಸಿಎಂ ಡಿಕೆ ಶಿವಕುಮಾರ್ ಅವರು,  ವ್ಯಾಪಾರದ ವ್ಯಾಜ್ಯದ ಕಾರಣದಿಂದ ಸಣ್ಣ ಸ್ಫೋಟ ನಡೆದಿದೆ ಎಂದು ಹೇಳಿಕೆ ನೀಡಿ, ತನಿಖೆಯ ದಿಕ್ಕು ತಪ್ಪಿಸಿದ್ದರು.

ಅದರಂತೆ ರಾಜ್ಯದ ಪೊಲೀಸ್ ಇಲಾಖೆಯು ತನಿಖೆ ನಡೆಸುತ್ತಿದ್ದರು. ಈ ಕಾರಣದಿಂದ ಆರೋಪಿಗಳ ಬಂಧನ ಸಾಧ್ಯವಾಗಿರಲಿಲ್ಲ. ಅಲ್ಪಸಂಖ್ಯಾತರ ತುಷ್ಟೀಕರಣಕ್ಕಾಗಿ ಕಾಂಗ್ರೆಸ್ ಸರ್ಕಾರ ಆರೋಪಿಗಳ ಬಂಧನಕ್ಕೆ ಮುಂದಾಗಿರಲಿಲ್ಲ. ತನಿಖೆಯನ್ನು ಎನ್‌ಐಎ ವಹಿಸಿದ ನಂತರ ಆರೋಪಿಗಳ ಬಂಧನವಾಗಿದೆ ಎಂದರು.

ರಾಜ್ಯದಲ್ಲಿ ಆಗಬಹುದಾದ ದುರ್ಘಟನೆಗಳು ನಡೆಯುವುದನ್ನು ತಡೆಯಲು ಕಾರಣವಾಗಿರುವ ಎನ್ಐಎ ತಂಡಕ್ಕೆ ರಾಜ್ಯದ ಜನತೆಯ ಪರವಾಗಿ ಅಭಿನಂದನೆ ಸಲ್ಲಿಸಿದರು.


Share this Story:

Follow Webdunia kannada

ಮುಂದಿನ ಸುದ್ದಿ

ಕೈಯಲ್ಲಿ ಖಡ್ಗ ಹಿಡಿದು, ಕಾಂಗ್ರೆಸ್ ವಿರುದ್ಧ ಮಾತಿನ ಚಾಟಿ ಬೀಸಿದ ಕಂಗನಾ ರಣಾವತ್