ಡಿಕೆಶಿ ಶಿಸ್ತಿನ ಸಿಪಾಯಿ, ಸಿಎಂ ಆಗುವುದು ನಿಶ್ಚಿತ: ನಿಶ್ಚಲಾನಂದನಾಥ ಸ್ವಾಮೀಜಿ ಭರವಸೆ

Sampriya
ಶುಕ್ರವಾರ, 11 ಜುಲೈ 2025 (17:43 IST)
Photo Credit X
ಮಂಡ್ಯ: ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 136 ಸ್ಥಾನಗಳಿಸುವಲ್ಲಿ ಡಿಕೆ ಶಿವಕುಮಾರ್ ಅವರು ಸಾಕಷ್ಟು ಶ್ರಮಪಟ್ಟಿದ್ದಾರೆ. ಆದ್ದರಿಂದ ಅವರು ಸಿಎಂ ಆಗಬೇಕೆಂದು ಅವರ ಅಭಿಮಾನಿಗಳು ಬಯಸುತ್ತಿದ್ದಾರೆ. ಅವರು ಮುಖ್ಯಮಂತ್ರಿ ಆಗುವುದು ನಿಶ್ಚಿತ ಎಂದು ಕೆಂಗೇರಿಯ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ನಿಶ್ಚಲಾನಂದನಾಥ ಸ್ವಾಮೀಜಿ ಹೇಳಿದರು.

ಶುಕ್ರವಾರ ಮಾಧ್ಯಮದವರೊಂದಿಗೆ ಅವರು ಮಾತನಾಡಿ, ಪಕ್ಷಕ್ಕಾಗಿ ಶ್ರಮಪಟ್ಟವರಿಗೆ ಸಿಎಂ ಆಗುವ ಪಕ್ಷಕ್ಕಾಗಿ ದುಡಿದ ಹಿರಿಯರಿಗೆ ಸಿಎಂ ಆಗುವ ಹಂಬಲ ಇದ್ದೇ ಇರುತ್ತದೆ. ಅದೇ ರೀತಿ ನಾವು ಕೂಡ ಸಿಎಂ ಆಗಲಿ ಎಂದು ಬಯಸುತ್ತೇವೆ. ಡಿ.ಕೆ.ಶಿವಕುಮಾರ್‌ ಪಕ್ಷದ ಶಿಸ್ತಿನ ಸಿಪಾಯಿ. ತಾಳ್ಮೆಯಿಂದ ಕಾಯ್ದು, ಒಳ್ಳೆಯ ಸ್ಥಾನ ಪಡೆದುಕೊಳ್ಳುತ್ತಾರೆ. ಹತ್ತಿರದಿಂದ ನೋಡಿದ ನಾನು ಅವರು  ಯಾವುದಕ್ಕೂ ಆತುರಪಡುವುದಿಲ್ಲ. ಸಂಯಮದಿಂದ ಪಕ್ಷವನ್ನು ಮುನ್ನಡೆಸಿ ಇಲ್ಲಿಯವರೆಗೆ ತಂದಿದ್ದಾರೆ ಎಂದರು.

ಒಕ್ಕಲಿಗ ಸಮುದಾಯ ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆಗಲಿ ಎಂದು ಚುನಾವಣೆಯಲ್ಲಿ ಬೆಂಬಲಿಸಿತ್ತು. ಮೈಸೂರು ಭಾಗದಲ್ಲಿ ಹೆಚ್ಚು ಒಲವು ತೋರಿದ್ದಕ್ಕಾಗಿ ಕಾಂಗ್ರೆಸ್‌ಗೆ ಹೆಚ್ಚು ಸೀಟುಗಳು ಬಂದವು. ಹೈಕಮಾಂಡ್‌ ಯಾವ ನಿರ್ಧಾರ ಮಾಡುತ್ತದೆ ಎಂಬುದನ್ನು ಕಾದು ನೋಡೋಣ. ದೇವರ ಅನುಗ್ರಹ ಅವರ ಮೇಲೆ ಇರಲಿ ಎಂದು ಶುಭ ಹಾರೈಸಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಈ ಒಂದು ಕಾರಣಕ್ಕೆ ಸಿದ್ದರಾಮಯ್ಯ ಮೇಲೆ ರಾಹುಲ್ ಗಾಂಧಿಗೆ ಹೆಚ್ಚು ಒಲವು

ಪ್ರಿಯಕರನ ಜೊತೆ ಸೇರಿ ಗಂಡನ ಕೊಂದು ಡ್ರಮ್ ನಲ್ಲಿರಿಸಿದ್ದ ಮುಸ್ಕಾನ್ ಕತೆ ಏನಾಗಿದೆ ನೋಡಿ

ಯಡಿಯೂರಪ್ಪ ಅಂದೇ ಡಿಕೆ ಶಿವಕುಮಾರ್ ಭವಿಷ್ಯ ನುಡಿದಿದ್ದರು

ಅಯೋಧ್ಯೆಯಲ್ಲಿ ರಾರಾಜಿಸಲಿದೆ ರಘುವಂಶದ ಕೇಸರಿ ಧ್ವಜ: ಪ್ರಧಾನಿ ಮೋದಿ ಚಾಲನೆ

ರಾಜ್ಯದ ಸಿಎಂ ಕುರ್ಚಿ ಫೈಟ್ ಪರಿಹಾರಕ್ಕೆ ಈ ಒಂದು ಮೀಟಿಂಗ್ ಮೇಲೇ ಎಲ್ಲರ ಕಣ್ಣು

ಮುಂದಿನ ಸುದ್ದಿ
Show comments