Publish Date: Tue, 17 Oct 2017 (18:10 IST)
Updated Date: Tue, 17 Oct 2017 (18:12 IST)
ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ನನ್ನ ಬಳಿ ಭಿಕ್ಷೆ ಬೇಡಿ ಬಂದಿದ್ದರು ಎಂದು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ ಶಾಸಕ ಸಿ.ಪಿ.ಯೋಗೇಶ್ವರ್ ವಾಗ್ದಾಳಿ ನಡೆಸಿದ್ದಾರೆ.
ಕಳೆದ ಲೋಕಸಭೆ ಉಪ ಚುನಾವಣೆಯಲ್ಲಿ ಡಿಕೆಶಿ ಸಹೋದರ ಸುರೇಶ್ ಚುನಾವಣೆಗೆ ಸ್ಪರ್ಧಿಸಿದಾಗ ನನ್ನ ಬಳಿ ಬಂದ ಸಚಿವ ಡಿ.ಕೆ.ಶಿವಕುಮಾರ್, ನನಗೆ ಸಹಾಯ ಮಾಡಿ ಚುನಾವಣೆ ಗೆದ್ದಲ್ಲಿ ನಾನು ಕೆಪಿಸಿಸಿ ಅಧ್ಯಕ್ಷನಾಗುತ್ತೇನೆ, ಮುಖ್ಯಮಂತ್ರಿಯಾಗುತ್ತೇನೆ. ನಿಮ್ಮನ್ನು ಸಚಿವರನ್ನಾಗಿ ಮಾಡುತ್ತೇನೆ ಎಂದು ಭಿಕ್ಷೆ ಕೇಳಲು ಬಂದಿದ್ದರು ಎಂದು ಆರೋಪಿಸಿದ್ದಾರೆ.
ಚನ್ನಪಟ್ಟಣದ ಋುಣ ಡಿ.ಕೆ.ಶಿವಕುಮಾರ್ ಅವರ ಮೇಲಿದೆ. ಅದನ್ನು ಅವರು ಮರೆಯಬಾರದು ಎಂದು ಯೋಗೇಶ್ವರ್ ತಿರುಗೇಟು ನೀಡಿದ್ದಾರೆ.
ಡಿಕೆಶಿವಕುಮಾರ್ ತಿರುಗೇಟು
ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಪಕ್ಷಕ್ಕೆ ಮೋಸ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷ ಅವರಿಗೆ ಎಲ್ಲವನ್ನು ನೀಡಿತ್ತು. ಆದಾಗ್ಯೂ ಕಾಂಗ್ರೆಸ್ ಪಕ್ಷವನ್ನು ತೊರೆದು ಮೋಸ ಮಾಡಿದ್ದಾರೆ. ಅವರ ರಾಜೀನಾಮೆಯಿಂದ ಪಕ್ಷಕ್ಕೆ ನಷ್ಟವಾಗಿಲ್ಲ ಎಂದು ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.
Rajesh patil
Publish Date: Tue, 17 Oct 2017 (18:10 IST)
Updated Date: Tue, 17 Oct 2017 (18:12 IST)