Select Your Language

Notifications

webdunia
webdunia
webdunia
webdunia

ಮಾಜಿ ಸಂಸದೆ ರಮ್ಯಾ ವಿರುದ್ಧ ಡಿ.ಕೆ.ಶಿವಕುಮಾರ್ ಬೆಂಬಲಿಗರು ಗರಂ

ಮಾಜಿ ಸಂಸದೆ ರಮ್ಯಾ ವಿರುದ್ಧ ಡಿ.ಕೆ.ಶಿವಕುಮಾರ್ ಬೆಂಬಲಿಗರು ಗರಂ
ಬೆಂಗಳೂರು , ಮಂಗಳವಾರ, 30 ಮೇ 2017 (18:36 IST)
ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಎದುರು ಕೆಪಿಸಿಸಿ ಅಧ್ಯಕ್ಷ ಸ್ಥಾನ ಕುರಿತಂತೆ ಇಂಧನ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಮಾಜಿ ಸಂಸದೆ ರಮ್ಯಾ ಅಪಸ್ವರ ಎತ್ತಿರುವುದೇ ಹುದ್ದೆ ಕೈ ತಪ್ಪಲು ಕಾರಣ ಎಂದು ಡಿಕೆಶಿ ಬೆಂಬಲಿಗರು ಗರಂ ಆಗಿದ್ದಾರೆ.
 
ಡಿ.ಕೆ.ಶಿವಕುಮಾರ್ ವಿರುದ್ಧ ರಮ್ಯಾ ಅಪಸ್ವರ ಎತ್ತಿರುವುದಕ್ಕೆ ರಮ್ಯಾ ವಿರುದ್ಧ ಬೆಂಬಲಿಗರ ಮುಂದೆ ಸಂಸದ ಡಿ.ಕೆ. ಸುರೇಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ರಾಹುಲ್ ಗಾಂಧಿ ಎದುರು ಪರಮೇಶ್ವರ್ ಪರ ರಮ್ಯಾ ಬ್ಯಾಟಿಂಗ್ ಮಾಡಿದ್ದರಿಂದ ಸಹೋದರ ಡಿಕೆಶಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಲು ಕಾರಣವಾಯಿತು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
 
ಕಾಂಗ್ರೆಸ್ ಪಕ್ಷದ ಹೈಕಮಾಂಡ್, ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್‌ರನ್ನು ಮುಂದುವರಿಸಲು ನಿರ್ಧರಿಸಿದ್ದರಿಂದ ಡಿಕೆಶಿಗೆ ಹುದ್ದೆ ಕೈ ತಪ್ಪಿದಂತಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಕೆಪಿಸಿಸಿ ಹುದ್ದೆಯೂ ಬೇಕು, ಗೃಹ ಸಚಿವ ಸ್ಥಾನವೂ ಬೇಕು: ಪರಮೇಶ್ವರ್