Select Your Language

Notifications

webdunia
webdunia
webdunia
webdunia

ಡಿಕೆಶಿ ತಂತ್ರ ಸಕ್ಸಸ್: ನಾಮಪತ್ರ ವಾ‍ಪಾಸ್ ಪಡೆದ ದಿಂಗಾಲೇಶ್ವರ ಸ್ವಾಮೀಜಿ

ಡಿಕೆಶಿ ತಂತ್ರ ಸಕ್ಸಸ್: ನಾಮಪತ್ರ ವಾ‍ಪಾಸ್ ಪಡೆದ ದಿಂಗಾಲೇಶ್ವರ ಸ್ವಾಮೀಜಿ

Sampriya

ಧಾರವಾಡ , ಸೋಮವಾರ, 22 ಏಪ್ರಿಲ್ 2024 (15:28 IST)
Photo Courtesy X
ಧಾರವಾಡ: ‌‌ ಹುಬ್ಬಳ್ಳಿ-ಧಾರವಾಡ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶಿರಹಟ್ಟಿಯ ಬಾಳೆಹೊಸೂರು ಫಕೀರೇಶ್ವರ ಮಠದ ಶ್ರೀ ದಿಂಗಾಲೇಶ್ವರ ಸ್ವಾಮೀಜಿ ವರು ನಾಮಪತ್ರ ಹಿಂತೆಗೆದಿದ್ದಾರೆ.

ದಿಂಗಾಲೇಶ್ವರ ಸ್ವಾಮೀಜಿ ತಮ್ಮ ಸೂಚಕಾರದ ಸಚ್ಚಿನ್​ ಪಾಟೀಲ್​ ಮತ್ತು ಅಮೃತ ಬಳ್ಳೊಳ್ಳಿ ಮೂಲಕ ನಾಮಪತ್ರ ಚುನಾವಣಾ ಆಯೋಗಕ್ಕೆ ತೆರಳಿ ನಾಮಪತ್ರ ವಾಪಾಸ್ ಪಡೆದಿದ್ದಾರೆ.

ಫಕೀರ ದಿಂಗಾಲೇಶ್ವರ ಸ್ವಾಮೀಜಿ ಅವರು ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಅವರ ವಿರುದ್ಧ ಸಮರ ಲೋಕಸಭೆ ಚುನಾವಣೆಗೆ ಕಣಕ್ಕಿಳಿದಿದ್ದರು. ಇನ್ನೂ ಪ್ರಹ್ಲಾದ ಜೋಶಿ ಅವರನ್ನು ಸೋಲಿಸುವುದೇ ತಮ್ಮ ಗುರಿ ಎಂದು ದಿಂಗಾಲೇಶ್ವರ ಸ್ವಾಮೀಜಿ ಬಹಿರಂಗವಾಗಿಯೇ ಹೇಳಿಕೆ ಕೊಟ್ಟಿದ್ದರು.

ಇನ್ನೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹುಬ್ಬಳ್ಳಿ-ಧಾರವಾಡ ಕ್ಷೇತ್ರದಿಂದ ಸಲ್ಲಿಸಿರುವ ನಾಮಪತ್ರ ಹಿಂಪಡೆದು ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ ಅವರಿಗೆ ಬೆಂಬಲಿಸುವಂತೆ  ದಿಂಗಾಲೇಶ್ವರ ಸ್ವಾಮೀಜಿ ಬಳಿ ಮನವಿ ಮಾಡಿದ್ದರು.

ಇದೀಗ ದಿಂಗಾಲೇಶ್ವರ ಸ್ವಾಮೀಜಿ ಅವರು ನಾಮಪತ್ರ ವಾಪಾಸ್ ಪಡೆಯುವ ಮೂಲಕ ಕಾಂಗ್ರೆಸ್​ನ ತಂತ್ರ ಸಕ್ಸಸ್‌ ಆಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ಅಧಿಕಾರಕ್ಕೆ ಬಂದರೆ ಮಹಿಳೆಯರು ಮಂಗಳಸೂತ್ರ ಕಳೆದುಕೊಳ್ಳುತ್ತಾರೆ: ಡಾ. ಯತೀಂದ್ರ