ಕೊರೊನಾ ಪರಿಹಾರಕ್ಕಾಗಿ ನಮ್ಮ ಸಂಬಳ ಕಟ್ ಮಾಡಬೇಡಿ-ಸರ್ಕಾರಕ್ಕೆ ಪೊಲೀಸ್ ಸಿಬ್ಬಂದಿ ಪತ್ರ

ಶನಿವಾರ, 4 ಏಪ್ರಿಲ್ 2020 (10:45 IST)
ರಾಯಚೂರು : ಕೊರೊನಾ ಪರಿಹಾರಕ್ಕಾಗಿ ರಾಜ್ಯ ಸರ್ಕಾರಿ ನೌಕರರ ವೇತನ ಕಡಿತಕ್ಕೆ ನೌಕರರು ವಿರೋಧ ವ್ಯಕ್ತಪಡಿಸಿದ್ದಾರೆ.

ಕೊರೊನಾ ನಿಯಂತ್ರಣಕ್ಕೆ ಹಾಗೂ ಪರಿಹಾರಕ್ಕಾಗಿ ಸರ್ಕಾರಿ ನೌಕರರ ಒಂದು ತಿಂಗಳ ಸಂಬಳ ಕಟ್ ಮಾಡುವುದಾಗಿ ಸರ್ಕಾರ ನಿರ್ಧರಿಸಿದೆ. ಇದಕ್ಕೆ ರಾಯಚೂರು ಪೊಲೀಸ್ ಸಿಬ್ಬಂದಿಗಳು  ವಿರೋಧ ವ್ಯಕ್ತಪಡಿಸಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

 

ಹಗಲಿರುಳು ರಜೆ ಇಲ್ಲದೆ ಶ್ರಮಿಸುತ್ತಿದ್ದೇವೆ. ಸೌಲಭ್ಯಗಳಿಲ್ಲದೇ ಕಷ್ಟಕರ ಪರಿಸ್ಥಿತಿಯಲ್ಲಿ ಕೆಲಸ ಮಾಡುತ್ತಿದ್ದೇವೆ. ಆದಕಾರಣ ಲಾಕ್ ಡೌನ್ ಹಿನ್ನಲೆಯಲ್ಲಿ ಮನೆಯಲ್ಲಿರುವ ವಿವಿಧ ಇಲಾಖೆ ಅಧಿಕಾರಿಗಳ ಸಂಬಳ ಬೇಕಾದರೆ ಕಡಿತ ಮಾಡಿ ಆದರೆ ನಮ್ಮ ಸಂಬಳ ಕಡಿತ ಮಾಡಬೇಡಿ ಎಂದು ಜಿಲ್ಲಾ ಪೊಲೀಸ್ ಅಧಿಕಾರಿ ಪತ್ರದ ಮೂಲಕ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಮಂಡ್ಯದಲ್ಲಿ ಲಾಕ್ ಡೌನ್ ಸಡಿಲಿಕೆ; ಕೆಲವು ವ್ಯಾಪಾರಕ್ಕೆ ಅನುಮತಿ ನೀಡಿದ ಡಿಸಿ