Select Your Language

Notifications

webdunia
webdunia
webdunia
webdunia

ಶಿಕ್ಷಕರಿಂದ ಈ ಕೆಲಸ ಮಾಡಿಸಬೇಡಿ-ಸಚಿವ ಸುರೇಶ್ ಕುಮಾರ್

ಶಿಕ್ಷಕರಿಂದ ಈ ಕೆಲಸ ಮಾಡಿಸಬೇಡಿ-ಸಚಿವ ಸುರೇಶ್ ಕುಮಾರ್
ಬೆಂಗಳೂರು , ಬುಧವಾರ, 13 ನವೆಂಬರ್ 2019 (06:20 IST)
ಬೆಂಗಳೂರು : ಚುನಾವಣಾ ಕೆಲಸಗಳಿಗೆ ಶಿಕ್ಷಕರನ್ನು ಬಳಸಬೇಡಿ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಕರ್ನಾಟಕ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ.



ಈ ವಿಚಾರವನ್ನು ಪತ್ರದ ಮೂಲಕ ತಿಳಿಸಿರುವ ಅವರು, ಚುನಾವಣಾ ಪ್ರಕ್ರಿಯೆ ಸೇರಿದಂತೆ ಹಲವು ಕೆಲಸಗಳಿಗೆ ಶಿಕ್ಷಕರನ್ನು ಬಳಸಿಕೊಳ್ಳಲಾಗುತ್ತಿದೆ. ಇದರಿಂದ ಪಾಠಗಳು ಸರಿಯಾಗಿ ಸಮಯಕ್ಕೆ ಮುಗಿಯುತ್ತಿಲ್ಲ. ಶಿಕ್ಷಕರಿಗೆ ಶಾಲಾ ಚಟುವಟಿಕೆಗಳಿಗೆ ಗಮನ ಹರಿಸಲು ಸಾಧ್ಯವಾಗುತ್ತಿಲ್ಲ.  ಆದಕಾರಣ ಚುನಾವಣಾ ಕೆಲಸಗಳಿಗೆ ಶಿಕ್ಷಕರನ್ನು ಬಳಸಬೇಡಿ ಎಂದು ಕರ್ನಾಟಕ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ.

 

ಹಿಂದಿನಿಂದಲೂ ಚುನಾವಣಾ ಕೆಲಸಗಳಿಗೆ ಶಿಕ್ಷಕರನ್ನು ನೇಮಿಸಲಾಗುತ್ತಿತ್ತು. ಆದರೆ ಇದರಿಂದ ಮಕ್ಕಳ ಶಿಕ್ಷಣದ ಮೇಲೆ ಪರಿಣಾಮ ಬೀರುತ್ತದೆ ಎಂದು ಮನಗೊಂಡ ಸಚಿವರು ಈ ಕೆಲಸದಿಂದ ಶಿಕ್ಷಕರನ್ನು ವಿಮುಕ್ತಗೊಳಿಸುವಂತೆ ಆಯೋಗಕ್ಕೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.

 

 


Share this Story:

Follow Webdunia kannada

ಮುಂದಿನ ಸುದ್ದಿ

ಜೆಡಿಎಸ್ ತೊರೆದ ಹಿರಿಯ ಶಾಸಕ ಬಿಜೆಪಿಗೆ ಜಂಪ್ : ಹೆಚ್.ಡಿ.ಕೆಗೆ ಶಾಕ್