Select Your Language

Notifications

webdunia
webdunia
webdunia
Saturday, 5 April 2025
webdunia

ಸರ್ಕಾರಿ ಕಚೇರಿಗಳಲ್ಲಿ ಲಂಚ ಕೊಡ್ಬೇಡಿ ! ಏನಿದು ಆದೇಶ?

ರಾಜ್ಯ ಸರ್ಕಾರ
ಬೆಂಗಳೂರು , ಮಂಗಳವಾರ, 27 ಸೆಪ್ಟಂಬರ್ 2022 (08:16 IST)
ಬೆಂಗಳೂರು : ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷಗಳು, ಗುತ್ತಿಗೆದಾರರ ಸಂಘಗಳು ಭ್ರಷ್ಟಾಚಾರ ಆರೋಪ ಮಾಡುತ್ತಿರುವ ಸಂದರ್ಭದಲ್ಲಿಯೇ, ನನಗೆ ಯಾರು ಲಂಚ  ಕೊಡಬೇಡಿ.

ನಾನು ಭ್ರಷ್ಟ ಅಧಿಕಾರಿಯಾಗಲಾರೆ ಎಂಬ ನಾಮಫಲಕವನ್ನು ಸರ್ಕಾರಿ ಕಚೇರಿಗಳಲ್ಲಿ ಅಳವಡಿಸುವಂತೆ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಸುತ್ತೋಲೆ ಹೊರಡಿಸಿದ್ದಾರೆ.

ಸಿಟಿಜನ್ ಎನ್ಕ್ವೈರಿ ಕೌನ್ಸಿಲ್ ಎಂಬ ಸಂಸ್ಥೆ ನಡೆಸಿರುವ ಭ್ರಷ್ಟಾಚಾರ ನಿರ್ಮೂಲನಾ ಅಭಿಯಾನದ ಅಂಗವಾಗಿ ಬೋರ್ಡ್ ಅಳವಡಿಸಿಕೊಳ್ಳಿ ಎಂದು ಆದೇಶ ನೀಡಿದ್ದಾರೆ. ಅಕ್ಟೋಬರ್ 2ರಿಂದ 20ರವರೆಗೆ ಈ ಕ್ಯಾಂಪೇನ್ ನಡೆಯಲಿದೆ. ಈ ಬಗ್ಗೆ ಕಾಂಗ್ರೆಸ್ ಕಿಡಿಕಾರಿದೆ.

ಸರ್ಕಾರದ ಮೇಲಿನ ಭ್ರಷ್ಟಾಚಾರದ ಆರೋಪಗಳನ್ನು ಡೈವರ್ಟ್ ಮಾಡಲು ಖಾಸಗಿ ಸಂಸ್ಥೆ ನಡೆಸಿರುವ ಅಭಿಯಾನವನ್ನು ಸರ್ಕಾರ ಒಪ್ಪಿಕೊಂಡಿದೆ. ಇದು ಎಷ್ಟು ದಿನ ನಡೆಯುತ್ತೋ ನೋಡ್ಬೇಕು ಎಂದು ಕೈ ನಾಯಕರು ಹೇಳಿದ್ದಾರೆ. 


Share this Story:

Follow Webdunia kannada

ಮುಂದಿನ ಸುದ್ದಿ

ಯಾತ್ರಿಗಳಿಗೆ ಗುಡ್ ನ್ಯೂಸ್ ನೀಡಿದ ಟಿಟಿಡಿ