Publish Date: Thu, 07 Dec 2017 (20:49 IST)
Updated Date: Thu, 07 Dec 2017 (20:53 IST)
ಪ್ರತಿಷ್ಠೆಗಾಗಿ ಪಕ್ಷಕ್ಕೆ ಹಾನಿ ಮಾಡುವವರನ್ನು ಸಹಿಸುವುದಿಲ್ಲ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಎಚ್ಚರಿಸಿದ್ದಾರೆ.
ಕಾಂಗ್ರೆಸ್ ಸರಣಿ ಸಭೆಯಲ್ಲಿ ಬೆಳಗಾವಿ ಹಾಗೂ ಗುಲ್ಬರ್ಗ ಕಂದಾಯ ವಿಭಾಗಗಳ ಜಿಲ್ಲೆಗಳ ಮುಖಂಡರು, ಜನಪ್ರತಿನಿಧಿಗಳು ಹಾಗೂ ವಿವಿಧ ಪದಾಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಯಾವುದೇ ಪ್ರತಿಷ್ಠೆಗಳಿಗೆ ಅಂಟಿಕೊಳ್ಳದೆ ಪಕ್ಷದ ಬಲವರ್ಧನೆಗೆ ಶ್ರಮಿಸಬೇಕು ಎಂದು ನಿರ್ದೇಶನ ನೀಡಿದ್ದಾರೆ.
ಪಕ್ಷವನ್ನು ಅಧಿಕಾರಕ್ಕೆ ತರುವುದು ಮೊದಲ ಆದ್ಯತೆಯಾಗಿದ್ದು ಪಕ್ಷ ಅಧಿಕಾರ ಹಿಡಿಯಲು ಯಾವುದೇ ಒಳ ಜಗಳಗಳು, ಒಣ ಪ್ರತಿಷ್ಠೆಗಳು ಕಾರಣವಾಗಬಾರದು. ಇದರಿಂದ ಪಕ್ಷಕ್ಕೆ ಹಾನಿಯಾಗಲಿದೆ. ಇದಕ್ಕೆ ಅವಕಾಶ ನೀಡಬಾರದು ಎಂದಿದ್ದಾರೆ.
ಈ ಹಿಂದೆ ನಡೆಸಿದ ಸಭೆಯಲ್ಲಿ ಚರ್ಚಿತವಾದ ಅಂಶಗಳು ಅನುಷ್ಠಾನಗೊಳಿಸಿದ ಬಗ್ಗೆ ವಿವರಣೆಗಳನ್ನು ಪಡೆದಿದ್ದಾರೆ. ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಕಾರ್ಯಗಳ ಬಗ್ಗೆ ನಿಗಾ ವಹಿಸಬೇಕು ಎಂದು ತಿಳಿಸಿದ್ದಾರೆ.
ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಪ್ರಚಾರ ಸಮಿತಿ ಅಧ್ಯಕ್ಷ ಎಸ್.ಆರ್.ಪಾಟೀಲ್ ಹಾಗೂ ವಿವಿಧ ಜಿಲ್ಲೆಗಳ ಮುಖಂಡರು ಭಾಗವಹಿಸಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.