Publish Date: Sat, 10 Nov 2018 (14:50 IST)
Updated Date: Sat, 10 Nov 2018 (14:52 IST)
ಮೈಸೂರು ಹುಲಿ ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ಸಮಾರಂಭದಲ್ಲಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಭಾಗಿ ಆಗದ ಹಿನ್ನೆಲೆಯಲ್ಲಿ ಸಿಎಂ ಗೈರಾಗಿರುವುದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಸಿಎಂ ಹೆಚ್.ಡಿ. ಕುಮಾರಸ್ವಾಮಿ ಗೈರನ್ನು ಸಮನ್ವಯ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ಕುಮಾರಸ್ವಾಮಿ ಅವರಿಗೆ ಅನಾರೋಗ್ಯ ಇರಬಹುದು. ಜೆಡಿಎಸ್ ಟಿಪ್ಪು ಜಯಂತಿಯಿಂದ ದೂರ ಉಳಿದಿಲ್ಲ ಎಂದಿರುವ ಅವರು, ಹಾಸನದಲ್ಲಿ ಅವರ ಸಹೋದರ ಹೆಚ್.ಡಿ. ರೇವಣ್ಣ ಟಿಪ್ಪು ಜಯಂತಿಯಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಿದರು.
ಕಬೀರಾನಂದ ಶ್ರೀ ಮಠದ ಸಮುದಾಯ ಭವನದ ಉದ್ಘಾಟನೆಗೆ ಆಗಮಿಸಿದ ಮಾಜಿ ಸಿಎಂ ಸಿದ್ದರಾಮಯ್ಯ ಚಿತ್ರದುರ್ಗದ ಹೆಲಿಪ್ಯಾಡ್ ನಲ್ಲಿ ಹೇಳಿಕೆ ನೀಡಿದ್ದಾರೆ.