Select Your Language

Notifications

webdunia
webdunia
webdunia
webdunia

ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಮಾಡಬಾರದು- ಇಂಧನ ಇಲಾಖೆಗೆ ಸೂಚನೆ ನೀಡಿದ ಸಿಎಂ

ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಮಾಡಬಾರದು- ಇಂಧನ ಇಲಾಖೆಗೆ ಸೂಚನೆ ನೀಡಿದ ಸಿಎಂ
ಬೆಂಗಳೂರು , ಬುಧವಾರ, 24 ಅಕ್ಟೋಬರ್ 2018 (12:36 IST)
ಬೆಂಗಳೂರು : ರಾಜ್ಯ ವಿದ್ಯುತ್ ನಿಗಮ ಇಂದಿನಿಂದ ರಾಜ್ಯಾದಾದ್ಯಂತ ಲೋಡ್ ಶೆಡ್ಡಿಂಗ್ ಜಾರಿ ಮಾಡಲು ಆದೇಶ ನೀಡುವ ಮೂಲಕ ಜನರಿಗೆ ಶಾಕ್ ನೀಡಿತ್ತು. ಆದರೆ ಈ ವಿಚಾರವಾಗಿ ಇದೀಗ ರಾಜ್ಯದ ಜನತೆಗೆ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಿಹಿಸುದ್ದಿ ನೀಡಿದ್ದಾರೆ.


ಸಿಎಂ ಹೆಚ್.ಡಿ ಕುಮಾರಸ್ವಾಮಿ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಮಾಡಬಾರದು ಎಂದು ಬೆಸ್ಕಾಂ, ಜೆಸ್ಕಾಂ, ಮೆಸ್ಕಾಂ, ಹೆಸ್ಕಾಂ ಸೇರಿ ಒಟ್ಟು 5 ವಿಭಾಗಗಳಿಗೆ ಸೂಚನೆ ನೀಡಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.


ಕೇಂದ್ರದ ಗ್ರಿಡ್ ನಿಂದ ವಿದ್ಯುತ್ ಸಿಗದಿದ್ದರೂ ಲೋಡ್ ಶೆಡ್ಡಿಂಗ್ ಇಲ್ಲ. ರಾಜ್ಯದ ಜನರ ಹಿತದೃಷ್ಟಿಯಿಂದ ಲೋಡ್ ಶೆಡ್ಡಿಂಗ್ ತಡೆ ನೀಡಲಾಗಿದೆ. ಈ ಬಗ್ಗೆ ಇಂಧನ ಇಲಾಖೆ ಕಾರ್ಯದರ್ಶಿ, ಎಂಡಿ ಜೊತೆ ಸಿಎಂ ಹೆಚ್.ಡಿ ಕುಮಾರಸ್ವಾಮಿ ದೂರವಾಣಿ ಮೂಲಕ ಮಾತನಾಡಿದ್ದು, ಐದು ವಿಭಾಗಗಳಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಶ್ರೀರಾಮುಲು ವಿರುದ್ಧ 420 ಪ್ರಯೋಗಿಸಿದ ಸಿದ್ದರಾಮಯ್ಯಗೆ ತಿರುಗೇಟು ನೀಡಿದ ಬಿಎಸ್ ವೈ