Publish Date: Wed, 02 Aug 2017 (15:07 IST)
Updated Date: Wed, 02 Aug 2017 (15:09 IST)
ಇಂಧನ ಸಚಿವ ಡಿ.ಕೆ.ಶಿವಕುಮಾಪ್ ನಿವಾಸದ ಮೇಲೆ ನಡೆದ ಐಟಿ ದಾಳಿ ಕುರಿತಂತೆ ಯಾವುದೇ ಪ್ರತಿಕ್ರಿಯೆ ನೀಡಬೇಡಿ ಎಂದು ಬಿಜೆಪಿ ಹೈಕಮಾಂಡ್ ಕಟ್ಟಾಜ್ಞೆ ಹೊರಡಿಸಿದೆ.
ರಾಜ್ಯ ಬಿಜೆಪಿ ನಾಯಕರು ಮಾಧ್ಯಮಗಳಿಗೆ ಯಾವುದೇ ಹೇಳಿಕೆ ನೀಡದಂತೆ ಸೂಚನೆ ನೀಡಿದ್ದಲ್ಲದೇ, ಯಾವುದೇ ಮಾಧ್ಯಮದಲ್ಲಿ ಚರ್ಚಾಕೂಟದಲ್ಲಿ ಪಾಲ್ಗೊಳ್ಳಬಾರದು ಎಂದು ಆದೇಶ ಹೊರಡಿಸಿದೆ.
ಇಂದು ಬೆಳಿಗ್ಗೆ ಏಕಕಾಲದಲ್ಲಿ ಆದಾಯ ತೆರಿಗೆ ಅಧಿಕಾರಿಗಳು ಇಂಧನ ಸಚಿವ ಡಿ.ಕೆ.ಶಿವಕುಮಾರ್ ನಿವಾಸಗಳ ಮೇಲೆ ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಅವರ ಮಾವನನ್ನು ಕೂಡಾ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ದಾಳಿಯ ಹಿಂದೆ ಪ್ರಧಾನಿ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕೈವಾಡವಿದೆ ಎಂದು ಕಾಂಗ್ರೆಸ್ ಆರೋಪಿಸುತ್ತಿರುವ ಹಿನ್ನೆಲೆಯಲ್ಲಿ, ಬಿಜೆಪಿ ನಾಯಕರು ಮೌನಕ್ಕೆ ಶರಣಾಗುವಂತೆ ಹೈಕಮಾಂಡ್ ಆದೇಶ ನೀಡಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.