Select Your Language

Notifications

webdunia
webdunia
webdunia
webdunia

ಜೆಡಿಎಸ್ ಪಕ್ಷಕ್ಕೆ ಅಲ್ಪಸಂಖ್ಯಾತರು ಮತ ಹಾಕಬೇಡಿ- ಪರಂ

ಜೆಡಿಎಸ್
ಅಲ್ಪಸಂಖ್ಯಾತರು ಜೆಡಿಎಸ್‍ಗೆ ಮತ ಹಾಕಬೇಡಿ, ಒಂದುವೇಳ ಹಾಕಿದರೂ ಬಿಜೆಪಿ ಪಕ್ಷಕ್ಕೆ ಅನುಕೂಲವಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಹೇಳಿದ್ದಾರೆ.

ಕಾಂಗ್ರೆಸ್ ನಡಿಗೆ ವಿಜಯದ ಕಡೆಗೆ ಎಂಬ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಅವರು ಅಲ್ಪ ಸಂಖ್ಯಾತರು ಹಾಗೂ ಕ್ರಿಶ್ಚಿಯನರು ನಮಗೆ ಬೇಡ, ಸಂವಿಧಾನವನ್ನು ಬದಲಾವಣೆ ಮಾಡುತ್ತೇವೆ ಎಂದಿದ್ದಾರೆ. ಇಂತಹವರಿಗೆ ಮತ ಹಾಕಬೇಕಾ ಎಂಧು ಪ್ರಶ್ನಿಸಿದ್ದಾರೆ.

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವ ಮೂಲಕ ಹೆಚ್ಚಿನ ಸ್ಥಾನಗಳನ್ನು ನೀಡಬೇಕು ಎಂದು ಕೋರಿದ್ದಾರೆ.

ಕಳೆದ 3 ಬಾರಿ ಜೆಡಿಎಸ್ ಪಕ್ಷದಿಂದ ಆಯ್ಕೆಯಾದ ಸ್ಥಳೀಯ ಶಾಸಕರು ತಾಲ್ಲೂಕಿನ ಅಭಿವೃದ್ದಿಗೆ ಪ್ರಯತ್ನಿಸಿಲ್ಲ ಎಂದು ದೂರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಜೆಡಿಎಸ್ ಟಿಕೆಟ್ ಮುಸ್ಲಿಂ ಅಭ್ಯರ್ಥಿಗೆ ನೀಡಲು ಒತ್ತಾಯ