Select Your Language

Notifications

webdunia
webdunia
webdunia
webdunia

ಚೆಕ್ ಪೋಸ್ಟ್ ಗಳಲ್ಲಿ ಈ ಕೆಲಸ ಮಾಡಿ ಎಂದ ಜಿಲ್ಲಾಧಿಕಾರಿ

ಚೆಕ್ ಪೋಸ್ಟ್ ಗಳಲ್ಲಿ ಈ ಕೆಲಸ ಮಾಡಿ ಎಂದ ಜಿಲ್ಲಾಧಿಕಾರಿ
ಉಡುಪಿ , ಭಾನುವಾರ, 12 ಏಪ್ರಿಲ್ 2020 (17:31 IST)
ಚೆಕ್ ಪೋಸ್ಟ್ ಗಳಲ್ಲಿ ಕಡ್ಡಾಯವಾಗಿ ಈ ಕೆಲಸ ಮಾಡುವಂತೆ ಜಿಲ್ಲಾಧಿಕಾರಿ ಖಡಕ್ ಸೂಚನೆ ಕೊಟ್ಟಿದ್ದಾರೆ.

ಕೊರೊನಾ ವೈರಸ್ ತಡೆ ಹಿನ್ನೆಲೆ ಉಡುಪಿ ಜಿಲ್ಲೆಗೆ ಹೊರ ಜಿಲ್ಲೆಯಿಂದ ಬರುವ ವಾಹನಗಳು ಮತ್ತು ಪ್ರಯಾಣಿಕರನ್ನು ನಿರ್ಭಂದಿಸಲಾಗಿದೆ. ತುರ್ತು ವೈದ್ಯಕೀಯ ಸೇವೆ ಅಗತ್ಯವಿರುವ ವ್ಯಕ್ತಿಗಳಿಗೆ ಮತ್ತು  ಸರಕು ಸಾಮಗ್ರಿ ಸಾಗಿಸುವ ವಾಹನಗಳಿಗೆ ಮಾತ್ರ ಪ್ರವೇಶ ನೀಡಿದ್ದು, ಇತರೆ ಜಿಲ್ಲೆಗಳಿಂದ ಪಾಸ್ ಪಡೆದು ಜಿಲ್ಲೆಗೆ ಬರಲು ಯತ್ನಿಸುವವರ ಪಾಸ್ ಗಳನ್ನು ಯಾವುದೇ ಕಾರಣಕ್ಕೂ ಮಾನ್ಯ ಮಾಡುವುದಿಲ್ಲ ಹಾಗೂ ಎಲ್ಲಾ ಚೆಕ್‍ಪೋಸ್ಟ್‍ಗಳಲ್ಲಿ ಸಿಸಿಟಿವಿ ಅಳವಡಿಸುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚಿಸಿದ್ದಾರೆ.

ಅಕ್ರಮವಾಗಿ ಒಳಬಂದವರಿಗೆ ಕಡ್ಡಾಯವಾಗಿ 14 ದಿನಗಳ ಸರ್ಕಾರಿ ಕ್ವಾರಂಟೈನ್ ವಿಧಿಸುವುದಾಗಿ ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಸಿದ್ದಾರೆ.

ಜಿಲ್ಲೆಯ ಎಲ್ಲಾ ಗಡಿಗಳಲ್ಲಿ ಸಂಬಂಧಪಟ್ಟ ತಹಸೀಲ್ದಾರ್ ಗಳು ಮತ್ತು ಪೊಲೀಸ್ ಇಲಾಖೆ ಅತ್ಯಂತ ಕಟ್ಟುನಿಟ್ಟಾಗಿ ತಪಾಸಣೆ ನಡೆಸುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಇತರೆ ಜಿಲ್ಲೆಗಳಿಂದ ನೀಡಿದ ಪಾಸ್ ಗಳನ್ನು ಮಾನ್ಯ ಮಾಡದಂತೆ ಮತ್ತೊಮ್ಮೆ ಸೂಚಿಸಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ATM ಗಳಲ್ಲಿ ಥರ್ಮಲ್ ಸ್ಕ್ಯಾನರ್ ಅಳವಡಿಕೆ ಮಾಡ್ಲೇಬೇಕು ಎಂದ ಡಿಸಿ