ಸಚಿವ ಕೆ.ಎಸ್.ಈಶ್ವರಪ್ಪ ಪ್ರಧಾನಿ ಮೋದಿ ಹುಟ್ಟುಹಬ್ಬಕ್ಕೆ ಶುಭ ಕೋರಿದ್ದು ಹೇಗೆ ಗೊತ್ತಾ?

ಮಂಗಳವಾರ, 17 ಸೆಪ್ಟಂಬರ್ 2019 (11:18 IST)
ಶಿವಮೊಗ್ಗ : ಇಂದು ಪ್ರಧಾನಿ ನರೇಂದ್ರ ಮೋದಿಯವರ 69ನೇ ವರ್ಷದ ಜನ್ಮದಿನದ ಹಿನ್ನಲೆಯಲ್ಲಿ ಬಿಜೆಪಿ ನಾಯಕರು ಸಂಭ್ರಮದಿಂದ ತಮ್ಮ ನಾಯಕನ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದಾರೆ.ಈ ವೇಳೆ ಶಿವಮೊಗ್ಗದಲ್ಲಿ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು ಮೋದಿ ಅವರು ಆರಂಭಿಸಿದ ಸ್ವಚ್ಛತಾ ಅಭಿಯಾನ ನಡೆಸುವ ಮೂಲಕ ಮೋದಿಯವರ ಹುಟ್ಟುಹಬ್ಬಕ್ಕೆ ವಿಶೇಷ ರೀತಿಯಲ್ಲಿ ಶುಭಾಶಯ ಕೋರಿದ್ದಾರೆ.

 

ಇಂದು ಮುಂಜಾನೆ ನಗರದ ವಿನೋಬನಗರ ಮಾರುಕಟ್ಟೆ ಆವರಣಕ್ಕೆ ಆಗಮಿಸಿದ ಸಚಿವರು, ಪೊರಕೆ ಹಿಡಿದು ವಿನೋಬನಗರದ ರಸ್ತೆ, ಚರಂಡಿ ಸ್ವಚ್ಛಗೊಳಿಸಿದ್ದಾರೆ. ಇವರಿಗೆ ಬಿಜೆಪಿ ಕಾರ್ಯಕರ್ತರು ಹಾಗೂ ಮೋದಿ ಅವರ ಅಭಿಮಾನಿಗಳು ಸಾಥ್ ನೀಡಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಪ್ರಧಾನಿ ಮೋದಿ ಹುಟ್ಟುಹಬ್ಬದ ಹಿನ್ನಲೆ; ಶುಭ ಹಾರೈಸಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ಜಿಟಿಡಿ