Select Your Language

Notifications

webdunia
webdunia
webdunia
webdunia

ಬಿಎಂಟಿಸಿ ಇಲಾಖೆ ವಿಧಿಸಿದ ದಂಡ ಎಷ್ಟು ಗೊತ್ತಾ?

ಬಿಎಂಟಿಸಿ ಇಲಾಖೆ ವಿಧಿಸಿದ ದಂಡ ಎಷ್ಟು ಗೊತ್ತಾ?
bangalore , ಬುಧವಾರ, 22 ಫೆಬ್ರವರಿ 2023 (16:00 IST)
BMTC ವಾಹನಗಳಲ್ಲಿ ಸಂಚರಿಸುವ ಪ್ರಯಾಣಿಕರು ಟಿಕೇಟನ್ನು ಪಡೆಯದೆ ಅಧಿಕೃತವಾಗಿ ಪ್ರಯಾಣ ಮಾಡುವವರಿಂದ 6,77,190/- ದಂಡ ವಸೂಲಿಯಾಗಿದೆ.ಸಂಸ್ಥೆಯ ಸಾರಿಗೆ ಆದಾಯದ ಸೋರಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾವಿರಾರು ರೂಪಾಯಿ ಬಿಎಂಟಿಸಿ ದಂಡ ವಸೂಲಿ ಮಾಡಿದೆ.
 
ಬಿಎಂಟಿಸಿ ಸಂಸ್ಥೆಯ ತನಿಖಾ ತಂಡಗಳು ಜನವರಿ-2023 ರ ಮಾಹೆಯಲ್ಲಿ ಒಟ್ಟು 16,226 ಟ್ರಿಪ್‌ಗಳನ್ನು ತಪಾಸಣೆ ಮಾಡಿದೆ.3591 ಟಿಕೇಟ್ ರಹಿತ ಪ್ರಯಾಣಿಕರು ಪತ್ತೆಯಾಗಿದ್ದು ,ಒಟ್ಟು ರೂ. 6,77,190/- ದಂಡ ವಸೂಲಿಯಾಗಿದೆ.ಸಂಸ್ಥೆಯ ನಿರ್ವಾಹಕರ ವಿರುದ್ಧ 1521 ಪ್ರಕರಣಗಳ ದಾಖಲಾಗಿದೆ.
ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಾಗಿರುವ ಆಸನಗಳಲ್ಲಿ ಕುಳಿತು ಪ್ರಯಾಣಿಸಿರುವ 322 ಪುರುಷ ಪ್ರಯಾಣಿಕರಿಂದ ಒಟ್ಟು 32,200/ ರೂ ಸಂಗ್ರಹವಾಗಿದೆ.ಮೋಟಾರು ವಾಹನ ಕಾಯ್ದೆ 1988ರ ಕಾಲಂ177 ಮತ್ತು 94 ರ ಪ್ರಕಾರ ದಂಡ ವಸೂಲಿ ಮಾಡಲಾಗಿದೆ. ಜನವರಿ-2023 ರ ಮಾಹೆಯಲ್ಲಿ 3913 ಪ್ರಯಾಣಿಕರಿಂದ ಒಟ್ಟು ರೂ 7,09,390/- ದಂಡ ವಸೂಲಿ ಮಾಡಲಾಗಿದ್ದು,ಪ್ರಯಾಣಿಕರು ಬಿಎಂಟಿಸಿ ಸಂಸ್ಥೆಯ ವಾಹನಗಳಲ್ಲಿ ಪ್ರಯಾಣಿಸುವಾಗ ಅಧಿಕೃತ ಟಿಕೇಟ್ ದಿನದ ಪಾಸು / ಮಾಸಿಕ ಪಾಸುಗಳನ್ನು ಹೊಂದಿ ಪ್ರಯಾಣಿಸುವುದು.ಇದರಿಂದ ಅನಗತ್ಯ ದಂಡ ಕಟ್ಟುವುದನ್ನು ತಡೆಯಬಹುದು .ಇಂತಹ ಪ್ರವೃತ್ತಿಯಿಂದ ಸಂಸ್ಥೆಯು ಉತ್ತಮ ಸೇವೆಯನ್ನು ಪ್ರಯಾಣಿಕರಿಗೆ ನೀಡಲು ಸಹಾಯವಾಗಲಿದೆ.ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಾಗಿರುವ ಜಾಗದಲ್ಲಿ ಮಹಿಳೆಯರಿಗೆ ಕುಳಿತುಕೊಳ್ಳಲು ಅವಕಾಶ ನೀಡಬೇಕೆಂದು ಬಿಎಂಟಿಸಿಯಿಂದ ಪ್ರಕಟಣೆ ಹೊರಡಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರಿನ ನಾಗವಾರದಲ್ಲಿ ಅಗ್ನಿ ಅವಘಡ