60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

Sampriya
ಮಂಗಳವಾರ, 18 ನವೆಂಬರ್ 2025 (19:31 IST)
Photo Credit X
ಮಂಡ್ಯ ಜಿಲ್ಲೆ: 60 ಅಡಿ ಆಳದ ಕಾಲುವೆಗೆ ಬಿದ್ದಿದ್ದ ಕಾಡಾನೆಯನ್ನು ಸತತ ನಾಲ್ಕು ಗಂಟೆ ಕಾರ್ಯಚರಣೆ ನಡೆಸಿ ಯಶಸ್ವಿಯಾಗಿ ಮೇರೆ ತಂದ ಘಟನೆ ತಾಲ್ಲೂಕಿನ ಶಿವನಸಮುದ್ರ (ಬ್ಲಫ್) ಬಳಿಯ ‘ಪಯನಿಯರ್‌ ಜೆನ್ಕೋ ಲಿಮಿಟೆಡ್ ವಿದ್ಯುತ್ ಉತ್ಪಾದನಾ ಕೇಂದ್ರ’ ಕಾಲುವೆಯಲ್ಲಿ ನಡೆದಿದೆ. 

ಶನಿವಾರ ರಾತ್ರಿ ವಿದ್ಯುತ್ ಘಟಕದ ಬಳಿ ಸುತ್ತಾಡುತ್ತಿದ್ದ 12 ವರ್ಷದ ಗಂಡು ಕಾಡಾನೆಯು ನೀರು ಕುಡಿಯಲು ಗೇಟ್ ಮೂಲಕ ನಾಲೆಗೆ ಇಳಿದಿತ್ತು. ಆದರೆ, ನೀರಿನ ಹರಿವಿನ ರಭಸದಿಂದಾಗಿ ಆನೆ ವಾಪಾಸ್ ಕಾಲುವೆಯಿಂದ ಮೇಲೆ ಬಾರಲು ಸಾಧ್ಯವಾಗಿಲ್ಲ. ಕಳೆದ ಮೂರು ದಿನಗಳಿಂದ ಕಾಲುವೆಯಲ್ಲಿಯೇ ಓಡಾಡಿ ನಿತ್ರಾಣಗೊಂಡಿತ್ತು. 

ಸೋಮವಾರದಿಂದ ಶುರುವಾದ ಕಾರ್ಯಚರಣೆ ಬೆಂಗಳೂರಿನ ಬಂದಿದ್ದ ಬೃಹತ್‌ ಕ್ರೇನ್ ಹಾಗೂ ಸ್ಥಳೀಯವಾಗಿ 2 ಕ್ರೇನ್‌ಗಳ ಮೂಲಕ ಮೊದಲಿಗೆ ಒಂದು ಕಂಟೇನರ್‌ ಅನ್ನು ಕಾಲುವೆಗೆ ಇಳಿಸಿ ಆನೆಯನ್ನು ಮೇಲೆತ್ತುವ ಪ್ರಯತ್ನ ನಡೆಸಲಾಯಿತು. ‌

ಫಲ ನೀಡದೆ ಇದ್ದಾಗ ಪಟಾಕಿ ಸಿಡಿಸಿ ಮಧ್ಯಭಾಗಕ್ಕೆ ಆನೆ ಬಂದ ಬಳಿಕ ಅರಿವಳಿಕೆ ಮದ್ದು ನೀಡಿದರು. ಸುಮಾರು 30 ನಿಮಿಷ ಆನೆಯು ಅಲ್ಲಿಯೇ ಓಡಾಟ ನಡೆಸಿ ಪ್ರಜ್ಞೆ ಕಳೆದುಕೊಂಡ ಬಳಿಕ, ಆನೆಗೆ ಅಲ್ಲಿಯೇ ವೈದ್ಯರು ಚಿಕಿತ್ಸೆ ನೀಡಿದರು.

ಬಳಿಕ ಅತ್ಯಂತ ಎಚ್ಚರಿಕೆಯಿಂದ 60 ಅಡಿ ಆಳದ ಕಾಲುವೆಯಿಂದ ಮೇಲೆ ತಂದರು. ಪ್ರಥಮ ಚಿಕಿತ್ಸೆ ನೀಡಿದ ನಂತರ, ಆರೋಗ್ಯ ಸ್ಥಿತಿಯನ್ನು ಖಾತ್ರಿಪಡಿಸಿಕೊಂಡು ಪಕ್ಕದಲ್ಲೇ ಇದ್ದ ಕಾವೇರಿ ವನ್ಯಜೀವಿ ಅರಣ್ಯಕ್ಕೆ ಸುರಕ್ಷಿತವಾಗಿ ಬಿಡಲಾಯಿತು. 


<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಹಾವೇರಿ: ನೀಡದ ಬೆಡ್‌, ಕಾರಿಡಾರ್‌ನಲ್ಲೇ ಹೆರಿಗೆ, ನೆಲಕ್ಕೆ ಬಿದ್ದು ಶಿಶು ಸಾವು

ಪತ್ನಿ ಪಾರ್ವತಿ ಆರೋಗ್ಯ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments