Publish Date: Sat, 01 Dec 2018 (19:09 IST)
Updated Date: Sat, 01 Dec 2018 (19:11 IST)
ಗಡಿ ಜಿಲ್ಲೆಯ ಪಟ್ಟಣದಲ್ಲಿ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಚಾಮರಾಜನಗರದ ಗುಂಡ್ಲುಪೇಟೆಯಲ್ಲಿ ಸ್ಥಳೀಯ ಶಾಸಕ ಸಿ.ಎಸ್. ನಿರಂಜನ್ ಕುಮಾರ್ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕು ಕಚೇರಿಯಲ್ಲಿ 20 ಅಂಶಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ನಿರಂಜನ್ ಕುಮಾರ್, ಅಭಿವೃದ್ಧಿ ಕಾರ್ಯಕ್ರಮ ಕುಂಟಿತಗೂಳ್ಳದಂತೆ ಎಚ್ಚರ ವಹಿಸಬೇಕೆಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.
ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಹಾಗೂ ಅನುಪಾಲನಾ ವರದಿ ನೀಡದ ಮತ್ತು ಸಭೆಗೆ ಗೈರಾಗುವ ಅಧಿಕಾರಿಗಳ ವಿರುದ್ಧ ಕ್ರಮ ವಹಿಸುವುದಾಗಿ ಹೇಳಿದರು. ಕುಂಠಿತವಾಗಿರುವ ಅಭಿವೃದ್ಧಿ ಕಾರ್ಯಗಳನ್ನ ಆದಷ್ಟು ಬೇಗ ಮುಗಿಸುವಂತೆ ಅಧಿಕಾರಿಗಳಿಗೆ ಇದೇ ವೇಳೆ ಸೂಚಿಸಿದರು.