Publish Date: Sat, 03 Nov 2018 (17:13 IST)
Updated Date: Sat, 03 Nov 2018 (17:15 IST)
ಬುಡಸಮೇತ ಬಿಜೆಪಿಯನ್ನು ಕಿತ್ತುಹಾಕಬೇಕು. ಹೀಗಂತ ಜನರು ತೀರ್ಮಾನ ಮಾಡಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹೇಳಿಕೆ ನೀಡಿದ್ದಾರೆ.
ಬಿಜೆಪಿಯವರು ಸುಳ್ಳು, ವಂಚನೆ ಮಾಡಿದ್ದಾರೆ. ರೈತರು, ಯುವಕರನ್ನು ಬಿಜೆಪಿಯವರು ದಾರಿ ತಪ್ಪಿಸುತ್ತಿದ್ದಾರೆ.
ಉಪ ಚುನಾವಣೆ ಎಲ್ಲಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪೆ ಅಲೆ ಇದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದ್ದಾರೆ.
ಬೀದರ್ ನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿಕೆ ನೀಡಿದ್ದು, ಈ ಉಪಚುನಾವಣೆಯಲ್ಲಿ ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಗಳು ಪ್ರಚಂಡ ಬಹುಮತದಿಂದ ಗೆಲ್ಲುತ್ತಾರೆ ಎಂದು ಭವಿಷ್ಯ ನುಡಿದರು.