Publish Date: Tue, 05 Mar 2019 (19:28 IST)
Updated Date: Tue, 05 Mar 2019 (19:31 IST)
ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ ಜಿಲ್ಲೆಯಲ್ಲಿಯೇ ಬಿಜೆಪಿ ಶಾಸಕರೊಬ್ಬರು ಗುಂಡಾವರ್ತನೆ ತೋರಿದ್ದಾರೆ ಎನ್ನಲಾದ ಆಡಿಯೋ ಈಗ ವೈರಲ್ ಆಗಿದೆ.
ಬಿಜೆಪಿ ಶಾಸಕನಿಂದ ಗುಂಡಾ ವರ್ತನೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಅಧಿಕಾರಿಗಳ ಮೇಲೆ ದರ್ಪ ತೋರಿಸಿರುವ ಶಾಸಕನ ಕ್ರಮಕ್ಕೆ ಖಂಡನೆ ವ್ಯಕ್ತವವಾಗುತ್ತಿದೆ.
ಕಲಬುರಗಿ ಜಿಲ್ಲೆಯ ಆಳಂದದ ಪುರಸಭೆ ಮುಖ್ಯಾಧಿಕಾರಿ ಚಂದ್ರಕಾಂತಗೆ ಅವಾಜ್ ಹಾಕಿದ ಶಾಸಕನ ಆಡಿಯೋ ವೈರಲ್ ಆಗಿದೆ.
ರಸ್ತೆ ಕಾಮಗಾರಿ ಕೆಲಸಕ್ಕೆ ಅನುಮತಿ ನೀಡಿದಕ್ಕೆ ಅವಾಚ್ಯ ಶಬ್ದಗಳಿಂದ ನಿಂದನೆಯನ್ನು ಬಿಜೆಪಿ ಶಾಸಕ ಸುಭಾಷ ಗುತ್ತೇದಾರ್ ಮಾಡಿದ್ದಾರೆ.
ಆಳಂದ ಶಾಸಕ ಸುಭಾಸ ಗುತ್ತೇದಾರರಿಂದ ಅಧಿಕಾರಿಗೆ ಅವಾಚ್ಯ ಪದಗಳಿಂದ ನಿಂದನೆ ಮಾಡಲಾಗಿದೆ ಎನ್ನುವ ಆರೋಪ ಕೇಳಿಬಂದಿದೆ. ಜನ ಪ್ರತಿನಿಧಿಗಳ ಗುಂಡಾ ವರ್ತನೆ ಎಷ್ಟು ಸರಿ ? ಎನ್ನುವ ಚರ್ಚೆ ನಡೆಯುತ್ತಿದೆ.