Publish Date: Sat, 08 Feb 2020 (09:35 IST)
Updated Date: Sat, 08 Feb 2020 (09:38 IST)
ಮಂಗಳೂರು : ಬಾಲಕನೊಬ್ಬನಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲಾ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸುರೇಶ್ ಪ್ರಭು(31) ಬಂಧಿತ ಆರೋಪಿ. ಈತ ಶಾಲೆಯಿಂದ ಮನೆಗೆ ಬರುತ್ತಿದ್ದ ಬಾಲಕನೊಬ್ಬನನ್ನು ಬಲವಂತವಾಗಿ ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ಬಗ್ಗೆ ಬಾಲಕ ತನ್ನ ತಾಯಿಯ ಬಳಿ ತಿಳಿಸಿದ್ದಾನೆ.
ಈ ಹಿನ್ನಲೆಯಲ್ಲಿ ತಾಯಿ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.