Select Your Language

Notifications

webdunia
webdunia
webdunia
webdunia

ಪಾರ್ಟಿ ಮುಗಿಸಿ ಮನೆಗೆ ಬರುತ್ತಿದ್ದ ಮಹಿಳೆಗೆ ಕಾಮುಕನೊಬ್ಬ ಮಾಡಿದ್ದೇನು ಗೊತ್ತಾ?

ಪಾರ್ಟಿ ಮುಗಿಸಿ ಮನೆಗೆ ಬರುತ್ತಿದ್ದ ಮಹಿಳೆಗೆ ಕಾಮುಕನೊಬ್ಬ ಮಾಡಿದ್ದೇನು ಗೊತ್ತಾ?
ಬೆಂಗಳೂರು , ಗುರುವಾರ, 20 ಡಿಸೆಂಬರ್ 2018 (07:43 IST)
ಬೆಂಗಳೂರು : ಪಬ್ ನಲ್ಲಿ ಪಾರ್ಟಿ ಮುಗಿಸಿ ಸ್ನೇಹಿತರ ಜೊತೆ ಹೋಗುತ್ತಿದ್ದ ಮಹಿಳೆಯೊಬ್ಬಳಿಗೆ ಕಾಮುಕನೊಬ್ಬ ಲೈಂಗಿಕ ಕಿರುಕುಳ ನೀಡಿದ ಘಟನೆ ಕೋರಮಂಗಲದ ಪಬ್ ಬಳಿ ನಡೆದಿದೆ.


ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ ಕೋರಮಂಗಲದ ನಿವಾಸಿ ಆನಂದ್(30) ಈ ಕೃತ್ಯ ಎಸಗಿದ ಕಾಮುಕನಾಗಿದ್ದು, ಈತ 31 ವರ್ಷದ ಮಹಿಳೆಯೊಬ್ಬಳು ಸ್ರೇಹಿತರ ಜೊತೆ ಪಬ್ ಗೆ ಹೋಗಿ ಪಾರ್ಟಿ ಮುಗಿಸಿಕೊಂಡು  ರಾತ್ರಿ ಮನೆಗೆ ಮರಳುತ್ತಿದ್ದ ವೇಳೆ ಆಕೆಯನ್ನು ಹಿಂಬಾಲಿಸಿಕೊಂಡು ಬಂದು ಅಡ್ಡಗಟ್ಟಿ ಆಕೆಯ ಎದೆಯಭಾಗ ಮುಟ್ಟಿ  ಲೈಂಗಿಕ ಕಿರುಕುಳ ನೀಡಿದ್ದಾನೆ. ಆ ವೇಳೆ ಮಹಿಳೆ ಕಿರುಚಿದಾಗ ಆಕೆಯ ಸ್ನೇಹಿತರು ಅಲ್ಲಿಗೆ ಬರುತ್ತಿರುವುದನ್ನು ಕಂಡು ಆತ ಪರಾರಿಯಾಗಿದ್ದಾನೆ.


ಈ ಘಟನೆಗೆ ಸಂಬಂಧಿಸಿದಂತೆ ಮಹಿಳೆ ಕೋರಮಂಗಲದ ಪೊಲೀಸರಿಗೆ ದೂರು ನೀಡಿದ್ದು, ಈ ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಹಾಗೇ ಸಮೀಪದಲ್ಲೇ ಇರುವ ಮತ್ತೊಂದು ಹೋಟೆಲ್‌ನಲ್ಲಿ ಪಾರ್ಟಿ ಮಾಡಿದ್ದ ಆರೋಪಿ, ಅಮಲಿನಲ್ಲಿ ಈ ಕೃತ್ಯ ಎಸಗಿದ್ದಾಗಿ ತಿಳಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

Share this Story:

Follow Webdunia kannada

ಮುಂದಿನ ಸುದ್ದಿ

ಫೇಸ್ಬುಕ್ ಸ್ನೇಹಿತನ ಬಣ್ಣದ ಮಾತಿಗೆ ಮರುಳಾಗಿ ಸಾಮೂಹಿಕ ಅತ್ಯಾಚಾರಕ್ಕೊಳಗಾದ ಅಪ್ರಾಪ್ತೆ