Publish Date: Fri, 19 Oct 2018 (07:25 IST)
Updated Date: Fri, 19 Oct 2018 (07:26 IST)
ಬೆಂಗಳೂರು : ಖಾಸಗಿ ಕಂಪೆನಿಯೊಂದರಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬಳ ಮೇಲೆ ಅದೇ ಕಂಪೆನಿಯ ಸೂಪರ್ ವೈಸರ್ ಅತ್ಯಾಚಾರ ಎಸಗಿದ ಘಟನೆ ಬೆಳಕಿಗೆ ಬಂದಿದೆ.
ಮೋಹನ್ ಬಾಬು (30) ಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿದ ಆರೋಪಿ. ಈತ ಮಾರತಹಳ್ಳಿಯ ಔಟರ್ ರಿಂಗ್ರೋಡ್ ಬಳಿಯ ಖಾಸಗಿ ಕಂಪನಿಯಲ್ಲಿ ಸೂಪರ್ ವೈಸರ್ ಆಗಿ ಕೆಲಸ ಮಾಡುತ್ತಿದ್ದ. ಈತ ಅದೇ ಕಂಪೆನಿಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬಳಿಗೆ ಬಾತ್ ರೂಂ ಕ್ಲೀನ್ ಮಾಡಲು ಕಳಿಸಿ. ನಂತರ ತಾನು ಹಿಂದಿನಿಂದ ಹೋಗಿ ಬಾತ್ ರೂಂ ಲಾಕ್ ಮಾಡಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ.
ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.