Webdunia - Bharat's app for daily news and videos

Install App

ಮೈಸೂರು ಪಾಲಿಕೆ ಚುನಾವಣೆಯಲ್ಲಿ ಜೆಡಿಎಸ್ ಸ್ವತಂತ್ರವಾಗಿ ಸ್ಪರ್ಧಿಸಲು ಕಾರಣವೇನು ಗೊತ್ತಾ?

Webdunia
ಬುಧವಾರ, 24 ಫೆಬ್ರವರಿ 2021 (12:43 IST)
ಮೈಸೂರು : ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಚುನಾವಣೆ ಹಿನ್ನಲೆಯಲ್ಲಿ ಈ ಬಾರಿ ಸ್ವತಂತ್ರವಾಗಿ ಸ್ಪರ್ಧೆ ಮಾಡಲು ಜೆಡಿಎಸ್ ನಿರ್ಧರಿಸಿದೆ ಏಂಬುದಾಗಿ ತಿಳಿದುಬಂದಿದೆ. ಅಲ್ಲದೇ ಇದಕ್ಕೆ ಕಾರಣವೇನು ಎಂಬುದನ್ನು ಜೆಡಿಎಸ್ ನಾಯಕ ಕುಮಾರಸ್ವಾಮಿ ತಿಳಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಚುನಾವಣೆಯಲ್ಲಿ ಜೆಡಿಎಸ್ ಸ್ವತಂತ್ರವಾಗಿ ಸ್ಪರ್ಧಿಸಲಿದೆ. ಮೈಸೂರು ಪಾಲಿಕೆಯಲ್ಲಿ ನಮ್ಮ ಶಕ್ತಿಯನ್ನು ತೋರಿಸ್ತೇವೆ. ಜೆಡಿಎಸ್ ಬಗ್ಗೆ ಸಿದ್ದರಾಮಯ್ಯ ಹಗುರವಾಗಿ ಪರಿಗಣಿಸಿದ್ದಾರೆ. ಮೈಸೂರಿನಲ್ಲಿ ಜೆಡಿಎಸ್ ಶಕ್ತಿ ಏನೆಂದು ತೋರಿಸಲು ಸ್ಪರ್ಧೆ ಮಾಡುತ್ತಿದ್ದೇವೆ. ಜೆಡಿಎಸ್, ಕಾಂಗ್ರೆಸ್ ಮೈತ್ರಿ ಮುರಿಯಲು ಸಿದ್ದರಾಮಯ್ಯ ಕಾರಣ ಎಂದು ಹೇಳಿದ್ದಾರೆ.

ಅಲ್ಲದೇ ಜೆಡಿಎಸ್ ಪಕ್ಷವೇ ಅಲ್ಲ ಎಂದು ಸಿದ್ದರಾಮಯ್ಯ ಹೇಳುತ್ತಾರೆ. ಸಿದ್ದರಾಮಯ್ಯಗೆ ಮನವರಿಕೆ ಮಾಡಿಕೊಡಲು ನಿರ್ಧಾರ. ಪದೇ ಪದೇ ನಮ್ಮ ಪಕ್ಷದ ಬಗ್ಗೆ ಕೆಣಕಿ ಹೇಳಿಕೆ ನೀಡುತ್ತಾರೆ. ಜಿಟಿಡಿ, ಸಂದೇಶ್ ನಾಗರಾಜ್ ಜೆಡಿಎಸ್ ಗೆ ಹಾಕ್ತಾರೆ. ಡಿಕೆಶಿ ನನ್ನ ಜತೆ ಮಾತಾಡದಂತೆ ಒತ್ತಡ ಹಾಕಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments